ನೀಲಹಳ್ಳಿ ರಸ್ತೆಗಿಲ್ಲ ದುರಸ್ತಿ ಭಾಗ್ಯ
Team Udayavani, Jan 29, 2018, 5:38 PM IST
ಸೈದಾಪುರ: ಯಾದಗಿರಿ-ರಾಯಚೂರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಿಂದ ನೀಲಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.
ನೀಲಹಳ್ಳಿ, ಕಣೇಕಲ್ ಗ್ರಾಮಗಳ ಜನತೆ ನಿತ್ಯದ ವ್ಯಾಪಾರ ವಹಿವಾಟಿಗಾಗಿ ಜಿಲ್ಲಾ ಕೇಂದ್ರ ಯಾದಗಿರಿಯನ್ನೇ
ಅವಲಂಬಿಸಿದ್ದು, ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಇದಲ್ಲದೇ ನೀಲಹಳ್ಳಿ ಗ್ರಾಮದ ಜನತೆ ಈ ಹಾಳಾದ ರಸ್ತೆಯಲ್ಲಿ ತಮ್ಮ ಹೊಲಗದ್ದೆಗಳಿಗೆ ತೆರಳಬೇಕಾಗಿದೆ. ಈ ರಸ್ತೆಯಲ್ಲಿ ಎದ್ದಿರುವ ಜಲ್ಲಿ ಕಲ್ಲು ಸಂಚಾರಕ್ಕೆ ಅಯೋಗ್ಯವಾಗಿದ್ದು, ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಕಳೆದ ಹಲವು ವರ್ಷಗಳಿಂದ ಹಾಳಾದ ರಸ್ತೆ ದುರಸ್ತಿಗೊಳಿಸುವ ಗೋಜಿಗೆ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಹೋಹಿಲ್ಲ. ಈ ವಿಷಯದಲ್ಲಿ ಇವರು ಮೌನ ವಹಿಸಿದ್ದು, ಇದು ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಗುರುಮಠಕಲ್ ಮತಕ್ಷೇತ್ರದವರೇ ಆದ ಶಾಸಕ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಬಾಬುರಾವ್ ಚಿಂಚನಸೂರ ಅವರಿಗೆ ಗಡಿ ಭಾಗದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಾದರೂ ನೀಲಹಳ್ಳಿ ಗ್ರಾಮದಿಂದ ಯಾದಗಿರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆದರೆ ಸಂಬಂಧಿಸಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಯಾವ ರೀತಿಯ
ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ನೀಲಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅರ್ಧ ಭಾಗದಲ್ಲಿ ಜಲ್ಲಿಕಲ್ಲು ಎದ್ದಿದ್ದು, ಇದರಿಂದ ಗಡಿ ಭಾಗದ ಜನ ತೀರಾ ತೊಂದರೆ ಅನುಭವಿಸುತ್ತಿದ್ದಾರೆ. ಗುರುಮಠಕಲ್ ಮತಕ್ಷೇತ್ರದ ಶಾಸಕ ಬಾಬುರಾವ್ ಚಿಂಚನಸೂರ ಬಣ್ಣ ಬಣ್ಣದ ಮಾತುಗಳ ಮೂಲಕ ತಾವು ಕ್ಷೇತ್ರಾದ್ಯಂತ ಅಭಿವೃದ್ಧಿಯ ಹೊಳೆ ಹರಿಸಿದ್ದೇನೆ ಎಂದು ಜನರಿಗೆ ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಸ್ಥಿತಿಯೇ ಬೇರೆಯಾಗಿದೆ.
ಅಲ್ಲಾವುದ್ಧೀನ್, ನೀಲಹಳ್ಳಿ ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.