ಬಿಜೆಪಿಯಿಂದ ರೈತರಿಗಿಲ್ಲ ಉಳಿಗಾಲ


Team Udayavani, Dec 20, 2021, 2:11 PM IST

19farmer

ಹುಣಸಗಿ: ಬಿಜೆಪಿ ಆಡಳಿತಕ್ಕೆ ಬಂದಾಗಿನಿಂದಲೂ ಯಾವುದೇ ಹೇಳಿಕೊಳ್ಳುವಂತ ಕೆಲಸ ಮಾಡಿಲ್ಲ. ಬಿಜೆಯಿಂದ ರೈತಾಪಿ ಜನರಿಗೆ ಉಳಿಗಾಲವಿಲ್ಲ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಆರೋಪಿಸಿದರು.

ಕಕ್ಕೇರಾ ಪಟ್ಟಣದ ಪ್ರಮುಖ ವಾರ್ಡ್‍ಗಳಲ್ಲಿ ಯುಕೆಪಿ ಕ್ಯಾಂಪ್‌, ಯರಬಂಡಿ ಕ್ಯಾಂಪ್‌, ಹಿರೆಹಳ್ಳ, ಪೀರಗಾರದೊಡ್ಡಿ, ಕಕ್ಕೇರಾ ತಾಂಡಗಳಲ್ಲಿ ಪುರಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಗ್ಯಾಸ್‌ ಹಾಗೂ ತೈಲ ಸೇರಿದಂತೆ ದೈನಂದಿನ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರಿಗೆ ಬರೆ ಎಳೆದಿದೆ. ಹೀಗಾಗಿ ಬಿಜೆಪಿ ಸುಳ್ಳಿನ ಪಕ್ಷ ಎಂದು ದೂರಿದರು.

ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಕ್ಷೀರಾಭಾಗ್ಯ, ಅನ್ನಭಾಗ್ಯದಂತ ಯೋಜನೆಗಳ ಜಾರಿಗೆ ತಂದು ಅನುಕೂಲ ಮಾಡಿಕೊಟ್ಟಿದೆ. ಅಲ್ಲದೆ ಸೂರು ಇಲ್ಲದವರಿಗೆ ಲಕ್ಷಾಂತರ ಮನೆಗಳು ಮಂಜೂರು ಮಾಡಿದೆ. ದುರ್ದೈವ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮನೆ ಬಿಲ್‌ ತಡೆಹಿಡಿದಿದ್ದದಲ್ಲದೆ, ಇವರೆಗೂ ಒಂದೇ ಒಂದು ಮನೆ ಸಹ ನೀಡಿಲ್ಲ ಎಂದು ಹರಿಹಾಯ್ದರು.

ಪುರಸಭೆ ವ್ಯಾಪ್ತಿಯ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮತಹಾಕಿ ಅಭ್ಯರ್ಥಿಗಳಿಗೆ ಗೆಲ್ಲಿಸಿದಾಗ ಈ ಭಾಗದಲ್ಲಿ ಇನ್ನು ಅನೇಕ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆಗೊಳಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಸುರಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಮಾತನಾಡಿ, ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಆಡಳಿತದಲ್ಲಿ ಕಕ್ಕೇರಾವನ್ನು ಪುರಸಭೆಯನ್ನಾಗಿ ಮಾಡಿ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಹೀಗಾಗಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಆಶೀರ್ವದಿಸಬೇಕು ಎಂದು ತಿಳಿಸಿದರು.

ಮುಖಂಡರಾದ ರಾಜಾ ವೇಣುಗೋಪಾಲನಾಯಕ, ನವೀನ್‌ ಪಾಟೀಲ, ಗುಂಡಪ್ಪ ಸೊಲ್ಲಾಪುರ, ಮಲ್ಲಣ್ಣ ಸಾಹುಕಾರ, ಪರಮಣ್ಣ ಕುಂಬಾರ, ಪರಮಣ್ಣ ಗುತ್ತೇದಾರ, ರವಿಚಂದ್ರ ಸಾಹುಕಾರ ಆಲ್ದಾಳ, ಶರಣಕುಮಾರ ಸೊಲ್ಲಾಪುರ, ಬುಚ್ಚಪ್ಪನಾಯಕ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.