ಯಾದಗಿರಿಯಲ್ಲಿಲ್ಲ ಲಾಕ್‌ಡೌನ್‌


Team Udayavani, Jul 14, 2020, 2:24 PM IST

ಯಾದಗಿರಿಯಲ್ಲಿಲ್ಲ ಲಾಕ್‌ಡೌನ್‌

ಯಾದಗಿರಿ: ಏಪ್ರಿಲ್‌ನಲ್ಲಿ ಹಸಿರು ವಲಯದಲ್ಲಿದ್ದ ಯಾದಗಿರಿ ಜಿಲ್ಲೆಯಲ್ಲಿ ಜೂನ್‌ ಮತ್ತು ಜುಲೈ ತಿಂಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ್ದು, ಸಾಕಷ್ಟು ಆತಂಕ ಮೂಡಿಸಿದೆ. ಆದರೆ ಸಾವಿನ ಪ್ರಮಾಣ ಕಡಿಮೆ ಇರುವುದು ಸಮಾಧಾನ ಮೂಡಿಸಿದೆ.  ಆದರೆ, ಪುನಃ ಲಾಕ್‌ಡೌನ್‌ ಮಾಡುವ ಕುರಿತು ಜಿಲ್ಲಾಡಳಿತ ಇನ್ನೂ ನಿರ್ಧರಿಸಿಲ್ಲ.

ಏ.19ರವರೆಗೆ ಒಟ್ಟು 479 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿತ್ತು. ಒಬ್ಬರಲ್ಲಿಯೂ ಸೋಂಕು ಪತ್ತೆಯಾಗಿರಲಿಲ್ಲ. ಅಲ್ಲದೆ ದುಬೈನಿಂದ ಹಿಂತಿರುಗಿದ್ದ 71 ಜನರನ್ನು ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿತ್ತು ಅವರಲ್ಲಿಯೂ ಸೋಂಕು ಕಂಡುಬರಲಿಲ್ಲ. ಮೇ, ಜೂನ್‌ ತಿಂಗಳಲ್ಲಿ ಮಹಾರಾಷ್ಟ್ರದದಿಂದ ಜಿಲ್ಲೆಗೆ ಹಿಂತಿರುಗಿದವರಲ್ಲಿ ಸೋಂಕು ಪತ್ತೆಯಾಗಲಾರಂಭಿಸಿತು. ಜುಲೈನಲ್ಲಿ ಜಿಲ್ಲೆಯಲ್ಲಿ ಸಕಾರಾತ್ಮಕ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು ಇದೀಗ ಜಿಲ್ಲೆಯಲ್ಲಿ 1,288 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಸೋಂಕು ವ್ಯಾಪಕವಾಗಿ ಸಮುದಾಯಕ್ಕೆ ಹರಡುತ್ತಿರುವುದು ಕಂಡು ಬರುತ್ತಿದೆ. ಸೋಂಕಿತರ ಸಂಪರ್ಕದಲ್ಲಿದ್ದವರು, ಸಂಪರ್ಕವೇ ಪತ್ತೆಯಾಗದವರು ಹಾಗೂ ಗುಣಲಕ್ಷಣ ಇರದ ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈವರೆಗೆ ಜಿಲ್ಲಾಡಳಿತ 29,383 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ತಪಾಸಣೆ ಮಾಡಿದ್ದು, 27 ಸಾವಿರಕ್ಕೂ ಹೆಚ್ಚು ಜನರ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲಾ ಕೇಂದ್ರದಲ್ಲಿರುವ ಕೋವಿಡ್‌ ಆಸ್ಪತ್ರೆಯಲ್ಲಿ 250 ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು ಜಿಲ್ಲೆಯ ಶಹಾಪುರ, ಸುರಪುರ ತಲಾ 50 ಬೆಡ್‌ ಹಾಗೂ ಬಂದಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ 200 ಬೆಡ್‌ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ ಗಳನ್ನು ತೆರೆಯಲಾಗಿದ್ದು ಒಟ್ಟು 400 ಸೋಂಕಿತರನ್ನು ದಾಖಲಿಸಲಾಗಿದೆ.

ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಸೂಕ್ತ ಕ್ರಮಗಳನ್ನು ವಹಿಸಿದೆ. ಆದರೂ ಸದ್ಯ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪುತ್ತಿದೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಸರ್ಕಾರ ಲಾಕ್‌ಡೌನ್‌ ಕೈಗೊಳ್ಳುವ ನಿರ್ಧಾರವನ್ನು ಪರಿಸ್ಥಿತಿಗನುಗುಣವಾಗಿ ಕ್ರಮ ವಹಿಸಲು ಜಿಲ್ಲಾಡಳಿತಕ್ಕೆ ಹೊಣೆ ಬಿಟ್ಟಿದೆ. ಹೀಗಾಗಿ ಯಾದಗಿರಿಯಲ್ಲಿ ಲಾಕ್‌ಡೌನ್‌ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.