ಕೋವಿಡ್ ನಿಯಂತ್ರಣದಲ್ಲಿ ನಿರ್ಲಕ್ಷ್ಯ ಸಲ್ಲ: ಡಿಸಿ
Team Udayavani, Aug 14, 2020, 2:55 PM IST
ಸುರಪುರ: ಕೊವೀಡ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಸರಿಯಾಗಿ ಪತ್ತೆ ಹಚ್ಚುತ್ತಿಲ್ಲ. ಇದರಿಂದ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಇದು ಸರಿಯಲ್ಲ ಜವಾಬ್ದಾರಿಯಿಂದ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಹುಣಸಗಿ ಹಾಗೂ ಸುರಪುರ ತಾಲೂಕು ಅನುಷ್ಠಾನ ಅಧಿಕಾರಿ ಮತ್ತು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣದಲ್ಲಿ ಎಲ್ಲರಿಗಿಂತಲೂ ಆರೋಗ್ಯ ಇಲಾಖೆಯವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ದೇವರನ್ನು ನಾವ್ಯಾರು ಕಂಡಿಲ್ಲ. ಜನರ ಪಾಲಿಗೆ ವೈದ್ಯರೇ ನಿಜವಾದ ದೇವರು. ಹಾಗಾಗಿ ಜನ ನಿಮ್ಮ ಮೇಲೆ ತುಂಬಾ ಭರವಸೆ ಇಟ್ಟಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವನ್ನು ತ್ವರಿತವಾಗಿ ಪತ್ತೆ ಹಚ್ಚಿ ಅವರನ್ನೂ ತಪಾಸಣೆ ಮಾಡಿಸಿ. ಸೋಂಕು ಕಂಡುಬರದೆ ಇದ್ದಲ್ಲಿ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಬೇಕು. ಆಶಾ ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ಪ್ರತಿದಿನ ಅವರ ಆರೋಗ್ಯ ಕುರಿತು ವರದಿ ಸಂಗ್ರಹಿಸಿಕೊಳ್ಳಬೇಕು ಎಂದು ತಿಳಿಸಿದರು.
ನಗರದಲ್ಲಿ ಏಳು ಕಂಟೈನ್ಮೆಂಟ್ ವಲಯಗಳನ್ನಾಗಿ ಗುರುತಿಸಲಾಗಿದೆ. ಆ ವಲಯಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿಸಬೇಕು. ಯಾರಲ್ಲಾದರು ಜ್ವರ, ನೆಗಡಿ, ಕೆಮ್ಮು ಕಂಡುಬಂದಲ್ಲಿ ತಕ್ಷಣವೇ ಕೋವಿಡ್ ತಪಾಸಣೆ ಮಾಡಿಸಬೇಕು. ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದವರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಇದರಿಂದ ಸೋಂಕು ನಿಯಂತ್ರಣ ಮಾಡಲು ಸಾಧ್ಯ ಎಂದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಆರೋಗ್ಯಾಧಿಕಾರಿ ಎಂ.ಎಸ್. ಪಾಟೀಲ, ತಹಶೀಲ್ದಾರ್ ನಿಂಗಣ್ಣ ಬಿರಾದಾರ, ಹುಣಸಗಿ ತಹಶೀಲ್ದಾರ ವಿನಯಕುಮಾರ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ, ತಾಪಂ ಇಒ ಅಮರೇಶ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಕಕ್ಕೇರಾ ಪುರಸಭೆ ಮುಖ್ಯಾಧಿಕಾರಿ ಆದಪ್ಪ ಕೆಂಭಾವಿ ಸೇರಿ ವಿವಿಧ ಗ್ರಾಮಗಳ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.