ಜಮೀನು ಸರ್ವೇ ಕಾರ್ಯ ತ್ವರಿತ ವಿಲೇವಾರಿಗೆ ಸೂಚನೆ
Team Udayavani, Sep 1, 2022, 5:27 PM IST
ಯಾದಗಿರಿ: ತಾಲೂಕಿನ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಇಲಾಖೆ ಹಾಗೂ ನೋಂದಾಯಿತ ಸರ್ವೇಯರ್ ಗಳಿಗೆ ಪ್ರಕರಣ ಹಂಚಿಕೆ ಮಾಡಿದ ನಂತರ ಶೀಘ್ರ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಹಶೀಲ್ದಾರ್ ಕಚೇರಿ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳು ಸರ್ವೇಯರ್‌ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸುವಂತೆ ಸೂಚಿಸಿದರು.
ಮಾಸಾಶನ, ಪಹಣಿ, ಮೋಜಣಿ ಕಡತಗಳು, ಎಜೆಎಸ್ಕೆ ತಂತ್ರಾಂಶದಡಿ ಸ್ವೀಕೃತವಾದ ಅರ್ಜಿಗಳು, ನವೋದಯ ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಕಂದಾಯ ಇಲಾಖೆ ಸೇವೆಗಳನ್ನು ಆದ್ಯತೆಯಲ್ಲಿ ಒದಗಿಸಿ ಪ್ರಗತಿ ಕುಂಠಿತವಾಗದಂತೆ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನಗರದ ಹೆರಿಗೆ ಆಸ್ಪತ್ರೆಗೆ ಭೇಟಿ: ವೈದ್ಯರು ಸರಿಯಾದ ಸಮಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು. ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ, ಹೊರ ಮತ್ತು ಒಳ ರೋಗಿಗಳ ಹಿತರಕ್ಷಣೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿನ ಹೆರಿಗೆ ಕೋಣೆ, ವಿಶೇಷ ನವಜಾತ ಶಿಶು ಆರೈಕೆ ಕೇಂದ್ರ, ಮಕ್ಕಳ ಪೌಷ್ಟಿಕಾಂಶ ಮತ್ತು ಪುನರ್ವಸತಿ ಕೇಂದ್ರ, ಶಸ್ತ್ರ ಚಿಕಿತ್ಸಾ ಕೋಣೆ, ಒಳ ರೋಗಿಗಳ ಕೋಣೆ, ಪಿಎನ್‌ಸಿ ವಾರ್ಡ್, ಕ್ಷ-ಕಿರಣ ಕೋಣೆ, ರಕ್ತ ಸಂಗ್ರಹಣ ಕೇಂದ್ರ, ಚಿಕಿತ್ಸಾ ವಿಭಾಗ, ಡಯಾಲಿಸಿಸ್, ಒ.ಪಿ.ಡಿ, ವೈದ್ಯರ ತಪಾಸಣೆ ಕೊಠಡಿ, ಔಷಧಿ ವಿತರಣೆ ಕೊಠಡಿ, ರೋಗಿಗಳ ನೋಂದಣಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗದ ಕೊಠಡಿಗಳಿಗೆ ಜಿಲ್ಲಾಧಿಕಾರಿ ತೆರಳಿ ಪರಿಶೀಲಿಸಿ, ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ರಾಜೀವ್ ಗಾಂಧಿ ನಗರದಲ್ಲಿ ಅಂಗನವಾಡಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬೆರೆತು ಅಲ್ಲಿನ ಮೂಲ ಸೌಕರ್ಯಗಳನ್ನು ವೀಕ್ಷಿಸಿ, ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಖುದ್ದಾಗಿ ಪರೀಕ್ಷಿಸಿ ಪರಿಶೀಲಿಸಿದರು.
ನಗರಸಭೆ ಕಾರ್ಯಾಲಯಕ್ಕೆ ಭೇಟಿ: ನಗರದಲ್ಲಿನ ನಗರಸಭೆ ಕಾರ್ಯಲಯಕ್ಕೆ ಭೇಟಿ ನೀಡಿ, ಕಸ ವಿಲೇವಾರಿ ಸರಿಯಾದ ರೀತಿಯಲ್ಲಿ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಮತ್ತು ಮೂಲ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಉಪಾಧ್ಯಕ್ಷೆ ಚಂದ್ರಕಲಾ ಮಡ್ಡಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಆಯುಕ್ತ ಶರಣಪ್ಪ, ಡಿಎಚ್‌ಒ ಡಾ| ಗುರುರಾಜ, ಜಿಲ್ಲಾ ಕುಷ್ಠರೋಗ ಅಧಿಕಾರಿ ಲಕ್ಷ್ಮೀಕಾಂತ ಒಂಟಿಪೀರ, ಟಿಎಚ್‌ಒ ಡಾ| ಹಣಮಂತರೆಡ್ಡಿ, ಯಾದಗಿರಿ ಮಹಿಳಾ ಮತ್ತು ಮಕ್ಕಳ ಇಲಾಖೆ ತಾಲೂಕು ಅಧಿಕಾರಿ ರಾಧ ಮಣ್ಣೂರ್, ಹಣಮಂತ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.