ಅಧಿಕಾರಿಗಳ ದಾಳಿ: ಆರು ಬಾಲ ಕಾರ್ಮಿಕರು ವಶಕ್ಕೆ
Team Udayavani, Sep 2, 2017, 5:37 PM IST
ಕೆಂಭಾವಿ: ಬಾಲಕರನ್ನು ವಿವಿಧ ರೀತಿಯಲ್ಲಿ ದುಡಿಸಿಕೊಳ್ಳುವುದು ಮಹಾ ಅಪರಾಧವಾಗಿದ್ದು, ಬಾಲಕರನ್ನು
ದುಡಿಸಿಕೊಂಡಿದ್ದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ ಠಾಕೂರ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಜಿಲ್ಲಾ ಬಾಲ ಕಾರ್ಮಿಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ
ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಗುಟಖಾ, ತಂಬಾಕು, ಸಿಗರೇಟ್ ಸೇರಿದಂತೆ ಹಲವು ತಂಬಾಕು ಉತ್ಪನ್ನಗಳನ್ನು ಪತ್ತೆ ಹಚ್ಚಿ ಹಾಗೂ ಆರು ಜನ ಬಾಲ ಕಾರ್ಮಿಕರನ್ನು ವಶಕ್ಕೆ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹಲವು ಮಕ್ಕಳು ಶಾಲೆ ತೊರೆದು ವಿವಿಧ ಅಂಗಡಿ, ಗ್ಯಾರೇಜಗಳಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದ್ದು, ಆ ಎಲ್ಲ ಮಕ್ಕಳನ್ನು ರಕ್ಷಸಿ ಪಾಲಕರ ವಶಕ್ಕೆ ಒಪ್ಪಿಸಿ ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ಧ
ಕೇಸ್ ದಾಖಲಿಸಲಾಗುವುದು ಎಂದರು. ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ತಮ್ಮ
ಮಕ್ಕಳನ್ನು ಕೆಲಸಕ್ಕೆ ಕಳಿಸದೆ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಪಾಲಕರಲ್ಲಿ ಮನವಿ ಮಾಡಿದರು.
ನಂತರ ಪತ್ತೆ ಹಚ್ಚಿದ ಮಕ್ಕಳನ್ನು ಪಾಲಕರಿಗೆ ಒಪ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಪಾನಶಾಪ್, ಬಾರ್, ಕಿರಾಣಿ ಅಂಗಡಿ, ಹೋಟೆಲ್ ಸೇರಿದಂತೆ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿದ ತಂಡ ಹಲವು ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು 15 ವಿವಿಧ ಪ್ರಕರಣಗಳನ್ನು ದಾಖಲಿಸಿ ರೂ. 2200 ದಂಡ ವಿಧಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಮಹಾಲಕ್ಷ್ಮೀ ಸಜ್ಜನ, ಕಾರ್ಮಿಕ ನಿರೀಕ್ಷಕ ಗಂಗಾಧರ ನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಶರಥ ನಾಯಕ, ಸಿಆರ್‌ಸಿ ಬಸನಗೌಡ, ಪೊಲೀಸ್ ಪೇದೆ ಸಂಗಮೇಶ, ಹೋಮ್ ಗಾರ್ಡ್ ಮುರ್ತುಜಾ ತಂಡದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.