ಟೈರ್‌ಗೆ ಬೆಂಕಿ ಹಚ್ಚಿ ಕರವೇ ಆಕ್ರೋಶ
Team Udayavani, Jan 26, 2018, 5:10 PM IST
ಶಹಾಪುರ: ಕನ್ನಡಪರ ಸಂಘಟನೆಗಳು ಮಹದಾಯಿ ಯೋಜನೆ ಜಾರಿಗಾಗಿ ಕರ್ನಾಟಕ ಬಂದ್ ಕರೆ ನೀಡಿರುವ
ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಅವರಿಗೆ
ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ದೇವು ಬಿ.ಗುಡಿ, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಮಹದಾಯಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯದ ಆಶಯ ಈಡೇರುತ್ತಿಲ್ಲ. ಆದರೆ ಇದು ರಾಜಕೀಯ ವಿಷಯವಾಗಿ ಪರಿವರ್ತನೆಯಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಕುಡಿಯಲು ನೀರಿ ಅಗತ್ಯವಿದೆ. ಮಹದಾಯಿ ನದಿ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪರಿಪರಿಯಾಗಿ
ಕೇಳುವ ಸ್ಥಿತಿ ಬಂದಿದೆ. ಇದಕ್ಕೆ ಕಾರಣ ರಾಜಕೀಯ ಮೇಲಾಟ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೋವಾ ಸರಕಾರ ಕುಡಿಯುವ ನೀರು ಹರಿಸಲು ಅಡ್ಡಗಾಲು ಹಾಕುತ್ತಿದೆ. ಕುಡಿಯುವ ನೀರು ಬೇಡುವ ಹಕ್ಕು ನಮಗಿದೆ. ಮಹದಾಯಿ ನದಿ ನೀರು ಕರ್ನಾಟಕದ ಪಾಲಿಗೂ ಆಶಾಕಿರಣವಾಗಿದೆ. ನಮ್ಮ ಪಾಲಿನ ನೀರು ಕರ್ನಾಟಕಕ್ಕೆ ಒದಗಿಸಬೇಕೆಂದು ಆಗ್ರಹಿಸಿದರು. ಮಹದಾಯಿ ವಿವಾದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಬಸವೇಶ್ವರ ವೃತ್ತದಲ್ಲಿ ಟೆ„ರ್ ಗೆ ಬೆಂಕಿ ಹಚ್ಚುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮುಂಚಿತವಾಗಿ
ಚರಬಸವೇಶ್ವ ಕಮಾನದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಯಾವುದೇ ಬಂದ್ ಆಚರಣೆ ನಡೆಯಲಿಲ್ಲ. ಆದರೆ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಬೋನೇರ್, ಮಲ್ಲಿಕಾರ್ಜುನ ನಗನೂರ, ಮೌನೇಶ ಹಳಿಸಗರ,
ಭೀಮರಾಯ ಕಾಂಗ್ರೆಸ್, ವಿರೇಶ ಅಂಗಡಿ, ಅಮರೇಶಗೌಡ ಸಗರ, ವಿಜಯ ಚಿಗಿರಿ, ನಿಂಗು ಶಹಾಪುರ, ನಾಗರಾಜ ದೊರಿ, ನಿಂಗಣ್ಣ ಟಣಕೆದಾರ, ಶರಣು ಮದ್ರಿಕಿ, ಲೋಕನಾಥ ದೋರನಹಳಿ, ಮಹಾದೇವ ಮದ್ರಿಕಿ, ದೇವು ಸೂಗೂರ, ಯಲ್ಲಪ್ಪ ಸಗರ, ಮಲ್ಲಾರಾವ್ ಕುಲಕರ್ಣಿ, ಮರಿಲಿಂಗ ಸಗರ, ನಿಂಗು ತಿಮ್ಮಾಪುರ, ಸಾಬರಡ್ಡಿ ಸಗರ, ಪರಶುರಾಮ ಸಗರ, ದಂಡಪ್ಪ ಸಗರ, ರಾಜು ಶರಣು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.