ಯುವ ಬ್ರಿಗೇಡ್ ನಿಂದ ಉದ್ಯಾನವನ ಸ್ವತ್ಛತೆ
Team Udayavani, Jan 1, 2018, 4:06 PM IST
ಯಾದಗಿರಿ: ಕನಸಿನ ಕರ್ನಾಟಕ ಕಾರ್ಯಕ್ರಮದಡಿ ಜಿಲ್ಲಾ ಯುವ ಬ್ರಿಗೇಡ್ ವತಿಯಿಂದ ನಗರದ ಬಸವೇಶ್ವರ ಬಡಾವಣೆಯ ಉದ್ಯಾನವನ ಸ್ವತ್ಛತೆ ಕಾರ್ಯ ರವಿವಾರ ಬೆಳಿಗ್ಗೆ ನಡೆಯಿತು.
ಜಿಲ್ಲಾ ಯುವ ಬ್ರಿಗೇಡ್ ಸಂಚಾಲಕ ಸಂಗಮೇಶ ಕೆಂಭಾವಿ ನೇತೃತ್ವದಲ್ಲಿ ಯುವಕರ ತಂಡ ಹಾಳು ಬಿದ್ದಿದ್ದ
ಉದ್ಯಾನವನ ಒಳಗೆ ಗುದ್ದಲಿ, ಬುಟ್ಟಿ, ಬಾರಿಗೆ ಹಿಡಿದು ಸ್ವತ್ಛತೆ ಕಾರ್ಯ ಕೈಗೊಂಡರು.
ಈ ಸಂದರ್ಭದಲ್ಲಿ ಸಂಗಮೇಶ ಕೆಂಭಾವಿ ಮಾತನಾಡಿ, ಸರಕಾರವೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ನಮ್ಮ
ಸುತ್ತಮುತ್ತಲಿನ ಪರಿಸರದ ಸ್ವತ್ಛತೆಯನ್ನು ನಾವು ಕಾಪಾಡಿಕೊಳ್ಳಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸ್ವತ್ಛತೆ ಇದ್ದರೆ ಯಾವುದೇ ರೋಗಗಳು ಬರುವುದಿಲ್ಲ ಎಂದರು.
ಪೌರಾಯುಕ್ತ ಸಂಗಪ್ಪ ಉಪಾಸೆ ಮಾತನಾಡಿ, ಸ್ವತ್ಛತೆ ಮಾಡುವ ಮೂಲಕ ಹೊಸ ವರ್ಷ ಆಚರಿಸುತ್ತಿದ್ದೇವೆ.
ಸ್ವತ್ಛತಾ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಸಲಕರಣೆಗಳು ಹಾಗೂ ಕಾರ್ಮಿಕರನ್ನು ಒದಗಿಸುವ ಭರವಸೆ ನೀಡಿದರು.
ಮುಂಬರುವ ದಿನಗಳಲ್ಲಿ ಉದ್ಯಾನವನಕ್ಕೆ ಭದ್ರತೆ ಹಾಗೂ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರಾದ ಸುರೇಶ ಕುರುಂದಿ, ಮಲ್ಲಿಕಾರ್ಜುನ ಕಟ್ಟಿಮನಿ, ನಿಖೀಲ್
ಪಾಟೀಲ್, ಸಾಗರ್ ಬೇಳಿಕಟ್ಟಿ, ಗುರು ಅಬ್ಬೆ ತುಮಕೂರ, ಶರಣಬಸವ, ಶಿವಕುಮಾರ ಎಲ್ಹೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.