7288 ಜನರ ವರದಿ ಬರೋದು ಬಾಕಿ
Team Udayavani, May 29, 2020, 7:41 AM IST
ಯಾದಗಿರಿ: ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಗುರುವಾರ ಪಾಸಿಟಿವ್ ಬಂದ 7 ಪ್ರಕರಣ ಸೇರಿದಂತೆ ಮೇ 28ರವರೆಗೆ ಒಟ್ಟು 163 ವರದಿ ಪಾಸಿಟಿವ್ ಬಂದಿವೆ.
ಗುರುವಾರದ 731 ನೆಗೆಟಿವ್ ವರದಿ ಸೇರಿ ಈವರೆಗೆ 6022 ಮಾದರಿಗಳ ವರದಿ ನೆಗೆಟಿವ್ ಬಂದಿವೆ. 1659 ಜನರ ಮಾದರಿ ಸಂಗ್ರಹಿಸಲಾಗಿದ್ದು, ಇನ್ನು 7288 ಮಾದರಿಗಳ ವರದಿ ಬರಬೇಕಿದೆ ಎಂದು ಎಡಿಸಿ ಪ್ರಕಾಶ್ ರಜಪೂತ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಖಚಿತಪಟ್ಟ 163 ವ್ಯಕ್ತಿಗಳ ಪೈಕಿ 9 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಉಳಿದ 153 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 483 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1420 ಜನರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ 4 ಕಂಟೇನ್ಮೆಂಟ್ ಝೋನ್ ಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 89 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ 59 ಜನರನ್ನು, ಸುರಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ 39 ಮತ್ತು ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 59 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 224 ಇನ್ ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್ ಗಳಲ್ಲಿ ಒಟ್ಟು 14,643 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.