Raja Venkatappa Nayaka: ಅಗಲಿದ ಸುರಪುರದ ದೊರೆಗೆ ಜನರಿಂದ ಕಂಬನಿ
Team Udayavani, Feb 26, 2024, 1:18 PM IST
ಯಾದಗಿರಿ: ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೆಂಕಟ್ಟಪ್ಪ ನಾಯಕ್ ಅವರು ನಿನ್ನೆ ನಿಧನರಾದ ಹಿನ್ನೆಲೆಯಲ್ಲಿ ಇಂದು ಸುರಪುರ ನಗರದ ಶ್ರೀ ಫ್ರಭು ಕಾಲೇಜಿನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಶಾಸಕ ಹಾಗೂ ಹಾಲಿ ರಾಜ್ಯ ಉಗ್ರಾಣ ನಿಮಗದ ಅಧ್ಯಕ್ಷರಾಗಿದ್ದ ರಾಜಾ ವೆಂಕಟ್ಟಪ್ಪ ನಾಯಕ್ ಅವರ ಪಾರ್ಥಿವ ಶರೀರವನ್ನು ನೋಡಲು ಸುರಪುರ ಕ್ಷೇತ್ರದ ಜನತೆ ಜಮಾಯಿಸಿದ್ದು, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಜನರನ್ನು ನಿಭಾಯಿಸುತ್ತಿದ್ದಾರೆ.
ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಕೊಂಡು, ಸ್ಥಳದಲ್ಲಿಯೇ ಕುಳಿತಿದ್ದಾರೆ. ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಜೊತೆಗಿದ್ದಾರೆ.
ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಗರದ ಪ್ರಭು ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಈಗಾಗಲೇ ಹೊರಟ್ಟಿದ್ದು, ಸುರಪುರ ರಾಜ ಮನೆತನದ ಸಂಪ್ರದಾಯದಂತೆ ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.