ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಾಹಿಸಿಗಳು…!
Team Udayavani, Jul 15, 2020, 10:24 PM IST
ಯಾದಗಿರಿ: ಮಳೆ ನೀರು ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಿ ಸ್ಥಳೀಯರು ಸಾಹಸ ಮೆರೆದಿದ್ದಾರೆ.
ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಹೊಲದಲ್ಲಿ ಹತ್ತಿ ಬಿಡಿಸಲು ತೆರಳಿದ್ದ ಮಹಿಳೆಯರು ಮರಳಿ ಮನೆಗೆ ವಾಪಸ್ ಆಗುವ ವೇಳೆ ಈ ಘಟನೆ ನಡೆದಿದೆ.
ಕೂಲಿ ಕಾರ್ಮಿಕ ಮಹಿಳೆಯರು ಕೆಲಸ ಮುಗಿಸಿ ಆಟೋದಲ್ಲಿ ಕೂಯಿಲೂರು ಮಾರ್ಗವಾಗಿ ಆಶನಾಳಕ್ಕೆ ಹಿಂತಿರುಗುತ್ತಿದ್ದರು.
ಮಾರ್ಗ ಮಧ್ಯದ ಹಳ್ಳ ತುಂಬಿದ್ದ ಹಿನ್ನೆಲೆಯಲ್ಲಿ ಪಗಲಾಪುರ ಬಳಿ ಆಟೋವನ್ನು ಚಾಲಕ ನಿಲ್ಲಿಸಿದ್ದ. ಹೀಗಾಗಿ ಮಹಿಳೆಯರು ಗುಂಪಾಗಿ ಹಳ್ಳ ದಾಟುವ ಸಾಹಸಕ್ಕೆ ಮುಂದಾದ ಸಂದರ್ಭದಲ್ಲಿ ಅವರ ಗುಂಪಿನಲ್ಲಿದ್ದ ಓರ್ವ ಮಹಿಳೆ ನೀರಿನ ರಭಸಕ್ಕೆ ಕೊಚ್ಚಿ ಮುಳುಗತೊಡಗಿದರು.
ಈ ಸಂದರ್ಭದಲ್ಲಿ ಅಲ್ಲೇ ಸಮೀಪದಲ್ಲಿದ್ದ ಯುವಕರ ತಂಡ ಕೂಡಲೇ ಹಳ್ಳಕ್ಕೆ ಜಿಗಿದು ಈಜಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯ ಜೀವವನ್ನು ರಕ್ಷಿಸಿದ್ದಾರೆ.
ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆಯಿಂದಲೇ ಧಾರಾಕರ ಮಳೆ ಸುರಿಯತೊಡಗಿದ್ದು ಬಹುತೇಕ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.
ಅತೀ ಹೆಚ್ಚು ಮಳೆ ಯಾದಗಿರಿಯ ಸುತ್ತಮುತ್ತಲಿನ ಭಾಗದಲ್ಲಿ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ 20.95 ಮಿ.ಮೀ ಮಳೆಯಾಗಿರುವ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.