ಪಿಎಂ ನಿಧಿ ಸಾಲ ಸೌಲಭ್ಯ ಒದಗಿಸಲು ತಾಕೀತು

ಸಭೆ ಮುಗಿದ ನಂತರ ಮಾಹಿತಿ ಕೇಳಿ ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು ಸಮಜಾಯಿಸಿದರು.

Team Udayavani, Mar 11, 2021, 6:43 PM IST

Sala

ಸುರಪುರ: ಪ್ರಧಾನಮಂತ್ರಿ ಸ್ವಯಂ ಉದ್ಯೋಗ ನಿಧಿ  ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯ ವಿತರಣೆಗೆ ಆಯಾ ಬ್ಯಾಂಕ್‌ಗಳ ವ್ಯವಸ್ಥಾಪಕರು ತಮಗೆ ನೀಡಿರುವ ಗುರಿಯನ್ನು ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಭೀಮರಾವ ಪಂಚಾಳ ತಾಕೀತು ಮಾಡಿದರು.

ಇಲ್ಲಿಯ ತಾಪಂ ಕಚೇರಿಯಲ್ಲಿ ಬುಧವಾರ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರ ಅಧ್ಯಕ್ಷತೆಯಲ್ಲಿ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕ್‌ ವ್ಯವಸ್ಥಾಪಕರ ಸಭೆಯಲ್ಲಿ ಮಾತನಾಡಿದ ಅವರು, ಪಿಎಂ ಯೋಜನೆ ಗುರಿ ತಲುಪುವಲ್ಲಿ ಬಹುತೇಕ ವ್ಯವಸ್ಥಾಪಕರು ನಿರ್ಲಕ್ಷ ವಹಿಸಿದ್ದೀರಿ. ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ತ್ವರಿತವಾಗಿ ಕೆಲಸ ಮಾಡಿ ಸಾಲ ವಿತರಣೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸುರಪುರ ವಲಯದಲ್ಲಿ 590 ಅರ್ಜಿಗಳ ಪೈಕಿ 83 ಜನರಿಗೆ ಕಕ್ಕೇರಾ 87 ಅರ್ಜಿಗಳ ಪೈಕಿ 68 ಜನರಿಗೆ ಕೆಂಭಾವಿ 147 ಅರ್ಜಿಗಳ ಪೈಕಿ 72 ಜನರಿಗೆ ಸಾಲ ವಿತರಿಸಲಾಗಿದೆ. ಈ ಶನಿವಾರ ರಜೆ ನೀಡುವುದಿಲ್ಲ. ಎಲ್ಲಾ ವಲಯಗಳ ವ್ಯವಸ್ಥಾಪಕರು ಅಂದು ಬಾಕಿ ಉಳಿದಿರುವ ಅರ್ಜಿ ಪರಿಶೀಲಿಸಿ ಸಾಲ ವಿತರಣೆ ಕಾರ್ಯ ಮುಗಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಇದಕ್ಕೂ ಮೊದಲು ಸಭೆ ಆರಂಭವಾಗುತ್ತಿದ್ದಂತೆ ಶೋಷಿತಪರ ಸಂಘನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಭ ದೊರೆ ತನ್ನ ಕಾರ್ಯಕರ್ತರೊಂದಿಗೆ
ಸಭೆಯ ಒಳಗಡೆ ನುಗ್ಗಲು ಯತ್ನಿಸಿದರು. ಒಳಗೆ ಬರಬೇಡಿ. ಸಭೆ ಮುಗಿದ ನಂತರ ಮಾಹಿತಿ ಕೇಳಿ ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು ಸಮಜಾಯಿಸಿದರು.
ಈ ವೇಳೆ ಮಾತಿನ ಚಕಮಕಿ ನಡೆಯಿತು. ಸಭೆ ಕೆಲಕಾಲ ಗೊಂದಲದ ಗೂಡಾಗಿ ಪರಿಣಿಮಿಸಿತು.

ತಾಪಂ ಇಒ ಅಮರೇಶ ಮಧ್ಯಪ್ರವೇಶಿಸಿ ಪರಸ್ಥಿತಿ ತಿಳಿಗೊಳಿಸಿದರು. ಮಾರ್ಚ್‌ ಮುಗಿತ್ತಾ ಬರುತ್ತಿದೆ. ಬಡವರಿಗೆ ಬೀದಿ ಬದಿಯ ವ್ಯಾಪಾರಿಗಳಿಗೆ ಯೋಜನೆಯಡಿ ಬ್ಯಾಂಕ್‌ನವರು ಸಾಲ ನೀಡುತ್ತಿಲ್ಲ. ಸಣ್ಣಪುಟ್ಟ ವ್ಯಾಪಾರಿಗಳು ಬ್ಯಾಂಕ್‌ಗೆ ಅಲೆದಾಡುತ್ತಿದ್ದಾರೆ. ಅಧಿ ಕಾರಿಗಳ ನಿರ್ಲಕ್ಷದಿಂದ ಸರಕಾರಿ ಯೋಜನೆಗಳು ಅರ್ಹರಿಗೆ ತಲುಪದೇ ಹಳ್ಳ ಹಿಡಿಯುತ್ತಿವೆ ಎಂದು ಆರೋಪಿಸಿದರು. ಕೂಡಲೇ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ ಸಾಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು. ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ ತೋರಿದ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಆಗ್ರಹಿಸಿದರು.

ಕಕ್ಕೇರಾ, ಕೆಂಬಾವಿ, ಸುರಪುರ ರಂಗಮಪೇಟ ಸೇರಿದಂತೆ ತಾಲೂಕಿನ ಕೆನರಾ, ಎಸ್‌ಬಿಐ, ಇಂಡಿಯಾ, ಪಿಕೆಜಿಬಿ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳ ವ್ಯವಸ್ಥಾಪಕರು ಮತ್ತು ನಗರಸಭೆ ಪೌರಾಯುಕ್ತ ಪುರಸಭೆಗಳ ಮುಖ್ಯಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.