ಮೂಲ ಸೌಕರ್ಯಗಳಿಗೆ ಆದ್ಯತೆ
Team Udayavani, Mar 6, 2019, 9:39 AM IST
ಸುರಪುರ: ನೀರು ಶೌಚಾಲಯ ಸೇರಿದಂತೆ ನಗರದ ಜನತೆಗೆ ಮೂಲ ಸೌಕರ್ಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅನುಷ್ಠಾನ ಅಧಿಕಾರಿಗಳು ಕೈ ಜೋಡಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇ ಎಂದು ಶಾಸಕ ರಾಜುಗೌಡ ಹೇಳಿದರು.
ನಗರದಲ್ಲಿ ಸೋಮವಾರ ವಿವಿಧ ವಾರ್ಡಗಳಲ್ಲಿ 1 ಕೋಟಿ ವೆಚ್ಚದ 6 ನೂತನ ಕುಡಿಯುವ ಶುದ್ಧ ನೀರು ಘಟಕಗಳ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದೆ. ನದಿಯಲ್ಲಿ ಸರಿಯಾಗಿ ನೀರಿಲ್ಲ. ಇರುವಷ್ಟು ನೀರನ್ನು ನಗರಸಭೆಯವರು ಸಮರ್ಪಕವಾಗಿ ಸರಬರಾಜು ಮಾಡುತ್ತಿಲ್ಲ. ಹೀಗಾಗಿ ಜನತೆ ನೀರಿಗಾಗಿ ತತ್ತರಿಸುತ್ತಿದ್ದಾರೆ. ಜನರ ತಾಳ್ಮೆ ಪರೀಕ್ಷಿಸ ಬೇಡಿ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆ ಇಂಜಿನಿಯರ್ ಹಣಮಂತಪ್ಪ ಅಂಬ್ಲಿ ಅವರಿಗೆ ಕಡಕ್ಕಾಗಿ ಎಚ್ಚರಿಕೆ ನೀಡಿದರು.
ನಗರದ ಜನತೆಗೆ ಶುದ್ಧ ನೀರು ಕೊಡಬೇಕು ಎನುವ ಉದ್ದೇಶದಿಂದ ಸಾಕಷ್ಟು ಪ್ರಯತ್ನ ಪಟ್ಟು ಅನುದಾನ ತಂದಿದ್ದೇನೆ. ಇದನ್ನು ವ್ಯರ್ಥ ಆಗಲಿಕ್ಕೆ ಬಿಡುವುದಿಲ್ಲ ಎಂದು ತಾಕೀತು ಮಾಡಿದರು.
ಇಲಾಖೆ ಎಇಇ ಹಣಮಂತಪ್ಪ ಅಂಬಲಿ ಮಾತನಾಡಿ, ಮುಂಜುಮದಾರಗಲ್ಲಿ ಕುಂಬಾರ ಪೇಟ. ಕೆಂಗೂರಿ ವೃತ್ತ, ತರಕಾರಿ ಮಾರುಕಟ್ಟೆ, ತಿಮ್ಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ರಂಗಂಪೇಟ ತರಕಾರಿ ಮಾರುಕಟ್ಟೆ 6 ಕಡೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ನಗರಸಭೆ ಪೌರಾಯುಕ್ತ ಏಜಾಜ್ ಹುಸೇನ್, ತಾಪಂ ಅಧ್ಯಕ್ಷೆ ಅನುಸೂಬಾಯಿ ತಿರುಪತಿ ಚವ್ಹಾಣ, ಯಲ್ಲಪ್ಪ ಕುರುಕುಂದಿ, ಹನುಮಪ್ಪ ನಾಯಕ ತಾತಾ, ವೇಣುಮಾಧವ ನಾಯಕ ಮರಿಲಿಂಗಪ್ಪ ನಾಯಕ ಕರ್ನಾಳ, ಗ್ಯಾನಚಂದ ಜೈನ್, ಎಚ್.ಸಿ. ಪಾಟೀಲ, ದುರ್ಗಪ್ಪ ಗೋಗಿಕೇರಾ, ವಿಷ್ಣು ಗುತ್ತೇದಾರ್, ನರಸಿಂಹಕಾಂತ ಪಂಚಮಗಿರಿ, ಶಿವಕುಮಾರ ಕಟ್ಟಿಮನಿ, ಅಯ್ಯಣ್ಣ ಪೂಜಾರಿ, ಶಂಕರ ನಾಯಕ, ವಿರೂಪಾಕ್ಷಿ ಕರ್ನಾಳ, ಈಶ್ವರ ನಾಯಕ, ಶ್ರೀನಿವಾಸ ದರಬಾರಿ, ಬಸವರಾಜ ಕೊಡೇಕಲ್, ಮಲ್ಲೇಶಿ ಪಾಟೀಲ ನಾಗರಾಳ, ಭೀಮಾಶಂಕರ ಬಿಲ್ಲವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.