ವಾರ್ಡ್ ಅಭಿವೃದ್ಧಿಗೆ ಆದ್ಯತೆ ನೀಡಿ
Team Udayavani, Sep 15, 2018, 3:06 PM IST
ಯಾದಗಿರಿ: ನೂತನವಾಗಿ ಆಯ್ಕೆಯಾದ ನಗರಸಭೆ ಸದಸ್ಯರು ತಮ್ಮ ವಾರ್ಡ್ ಅಭಿವೃದ್ಧಿ ಪಡಿಸುವುದರೊಂದಿಗೆ
ನಗರವನ್ನು ಮತ್ತು ವಾರ್ಡ್‌ನ್ನು ಮಾದರಿಯಾಗಿಸಬೇಕೆಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು. ಇಲ್ಲಿನ ಶರಣ ನಗರದ ಶಹಾಪೂರ ಪೇಟೆಯ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ರುದ್ರಾಭಿಷೇಕ, ವಾರ್ಡ್ ನಂ. 3ರ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುವುದು ಎಂದರೆ ಸುಲಭದ ಮಾತಲ್ಲ. ಎಲ್ಲರನ್ನು ವಿಶ್ವಾಕ್ಕೆ ತೆಗೆದುಕೊಂಡು ಎಲ್ಲಾ
ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕಿವಿಮಾತು ಹೇಳಿದರು. ಸನ್ಮಾನ ಸ್ವೀಕರಿಸಿದ ವಿಲಾಸ ಪಾಟೀಲ ಮಾತನಾಡಿ, ವಾರ್ಡ್‌ನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಲು ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುವೆ ಎಂದು ತಿಳಿಸಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಜಯ ಪಾಟೀಲ ಮಾತನಾಡಿದರು. ಸಿದ್ಧಲಿಂಗೇಶ್ವರ
ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ದೊಡ್ಡಯ್ಯ ಸ್ವಾಮಿ ಸಾನ್ನಿಧ್ಯ ವಹಿಸಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರು, ಮುಖಂಡರಾದ ಅಯ್ಯಣ್ಣ ಹುಂಡೇಕಾರ್, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಸುಭಾಷ ಆಯಾರಕರ್, ಚಂದ್ರಶೇಖರ ಅರಳಿ, ಸಿದ್ದಣ್ಣ ಬಾಡದ, ಚನ್ನಬಸಪ್ಪ ಹುಂಡೇಕಲ್, ಸಣ್ಣ ಮುನಿಯಪ್ಪ ಬಾವಿಕಟ್ಟಿ, ಸೋಮನಾಥ ಜೈನ್, ರವಿ ಕಂದಕೂರು ಇದ್ದರು. ಸಂದೀಪ ಮಹೇಂದ್ರಕರ್, ಅಂಬರೇಷ ತಡಿಬಿಡಿ, ಸುಭಾಷ ದೇವದುರ್ಗ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.