ಅಕ್ರಮ ಮದ್ಯ ಮಾರಾಟ ನಿಷೇಧಿಸಿ
Team Udayavani, Oct 28, 2021, 3:41 PM IST
ಹುಣಸಗಿ: ವಜ್ಜಲ್ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದ್ದು ಇದರಿಂದ ಬಡ ಕುಟುಂಬಗಳು ಬೀದಿಗೆ ಬರುತ್ತಿವೆ. ಆದ್ದರಿಂದ ಈ ಕೂಡಲೇ ಮದ್ಯ ಮಾರಾಟ ನಿಷೇಧಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷೆ ಮಹಾದೇವಿ ಬೇವನಾಳಮಠ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯ ಎದುರು ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮದ್ಯ ಸೇವನೆಯಿಂದಾಗಿ ಸಂಸಾರಗಳು ಬೀದಿಗೆ ಬರುವಂತಾಗಿದೆ. ಹೆಣ್ಣು ಮಕ್ಕಳು ಹೊರಗಡೆ ಸಂಚರಿಸಲು ಭಯ ಪಡುವಂತಾಗಿದ್ದು ಅಶಾಂತಿ ವಾತವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಕೂಡಲೇ ಮದ್ಯ ಮಾರಾಟ ನಿಷೇಧಿಸಬೇಕು. ಇಲ್ಲದಿದ್ದರೆ ವಾರದೊಳಗೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಂದು ಎಚ್ಚರಿಸಿದರು.
ನಂತರ ತಹಶೀಲ್ದಾರ್ ಅಶೋಕಕುಮಾರ ಸುರಪುರಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಶರಣಮ್ಮ ಬೂದಿಹಾಳ, ಉಮಾದೇವಿ, ಮಹಾಲಕ್ಷ್ಮೀ, ಅಂಬಿಕಾ ಜಾಧವ, ಮಹಾದೇವಿ ಹಡಪದ, ಶಾಂತಮ್ಮ ಪೀರಾಪುರ, ನಿಂಗಮ್ಮ ಹೊಸಮನಿ ಸೇರಿದಂತೆ ಅನೇಕ ಮಹಿಳೆಯರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.