ಎನ್‌ಇಪಿ ಜಾರಿ ವಿರೋಧಿಸಿ ಪ್ರತಿಭಟನೆ
Team Udayavani, Dec 15, 2021, 1:10 PM IST
ಯಾದಗಿರಿ: ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿಯೂ ಉಪನ್ಯಾಸಕರ, ಮೂಲಭೂತ ಸೌಲಭ್ಯಗಳ ಕೊರತೆ ಕಣ್ಣಿಗೆ ರಾಚುವಂತಿದೆ. ಇಂತಹ ಸಮಸ್ಯೆ ಪರಿಹರಿಸದೇ ಏಕಾಏಕಿ ಹೊಸ ಶಿಕ್ಷಣ ನೀತಿ ಜಾರಿ ವಿರೋಧಿಸಿ ಎಐಡಿಎಸ್‌ಒ ಸಂಘಟನೆಯಿಂದ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿ.ವಿ. ವಿಜಯಪೂರ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ದಿಢೀರ್ ಎನ್‌ಇಪಿ 2020 ಜಾರಿ ಮಾಡಿದೆ. ಗುವಿವಿ ಈಗಾಗಲೇ ಸುಮಾರು ಶೇ.90 ಕಾಯಂ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇವೆ. ಇದರಿಂದ ಕನಿಷ್ಟ ಗುಣಮಟ್ಟದ ಶಿಕ್ಷಣ ಮತ್ತು ಸಮರ್ಪಕ ಪರೀಕ್ಷೆ, ಮೌಲ್ಯಮಾಪನ, ಅಂಕಪಟ್ಟಿಗಳು ವಿದ್ಯಾರ್ಥಿಗಳಿಗೆ ದೊರಕದೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ವೆಂಕಟೇಶ ದೇವದುರ್ಗಾ, ಜಿಲ್ಲಾ ಸಮಿತಿ ಸದಸ್ಯರಾದ ಮಹ್ಮದ್ ಅಶ್ರಫ್, ರಾಜೇಶ್ವರಿ ಮನಗನಾಳ, ಮೌನೇಶ, ಭಾಗ್ಯಜೋತಿ, ವಿದ್ಯಾರ್ಥಿಗಳಾದ ಅಶ್ವಿನಿ, ಆಶಪ್ಪಾ, ಮೌನೇಶ್ ಸೇರಿದಂತೆ ನೂರಾರು ಪದವಿ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.