ದಲಿತಪರ ಸಂಘಟನೆಗಳಿಂದ ಪ್ರತಿಭಟನೆ
Team Udayavani, Jan 5, 2018, 4:00 PM IST
ಶಹಾಪುರ: ಮಹಾರಾಷ್ಟ್ರದ ಕೋರೆಗಾಂವ್ನಲ್ಲಿ ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಆರೋಪಿತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಜ. 1ರಂದು ಮಹಾರಾಷ್ಟ್ರದ ಕೋರೆಗಾಂವ್ ಗ್ರಾಮದಲ್ಲಿದ್ದ ದಲಿತ ಸೇನೆಯ ವಿಜಯಸ್ಥಂಭದ ದರ್ಶನ ಪಡೆದು ದಲಿತ ಹುತಾತ್ಮ ವೀರಯೋಧರಿಗೆ ನಮನ ಸಲ್ಲಿಸಲು ಪ್ರತಿವರ್ಷದಂತೆ ವಿವಿಧಡೆಯಿಂದ ಜನ ಸೇರಿದ್ದರು. ಆದರೆ ಅಲ್ಲಿ ಸೇರಿದ್ದ ದಲಿತರ ಮೇಲೆ ದಾಂಧಲೆ ನಡೆಸಿ ಮಾರಣಾಂತಿಕ ಹಲ್ಲೆ ನಡೆದಿದೆ. ಕೋಮು ಗಲಭೆಗೆ ಒಳಗಾದ ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಆಗ್ರಹಿಸಿದರು. ಗಲಭೆಕೋರರ ವಿರುದ್ಧ ಕೂಡಲೇ ಮಹಾರಾಷ್ಟ್ರ ಸರಕಾರ ಮತ್ತು ಕೇಂದ್ರ ಸರಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮುಂಚಿತವಾಗಿ ನಗರದ ಸಿಬಿ ಕಮಾನದಿಂದ ಬಸವೇಶ್ವರ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ಜರುಗಿತು. ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಕುಮಾರ ತಳವಾರ, ಸಯ್ಯದ್ ಖಾಲಿದ್, ಶಿವಪುತ್ರ ಜವಳಿ, ರಾಮಣ್ಣ ಸಾದ್ಯಾಪುರ, ಸಯ್ಯದ್ ಖಾದ್ರಿ, ಶರಣು ದೋರನಹಳ್ಳಿ, ಅಜಯ್ ಯಳಸಂಗಿಕರ್, ಮರೆಪ್ಪ ಕನ್ಯಾ ಕೋಳೂರ, ರಾಯಪ್ಪ ಸಾಲಿಮನಿ ಹಾರಣಗೇರ, ಈರಣ್ಣ ಕಸನ್ ಸೇರಿದಂತೆ ದಸಂಸ ಮತ್ತು ಎಸ್ಡಿಪಿಐ ಸಂಘಟನೆಗಳ ಕಾರ್ಯಕರ್ತರ ಭಾಗವಹಿಸಿದ್ದರು.
ಡಿಎಸ್ಪಿ ಪಾಂಡುರಂಗ, ನಗರ ಸಿಪಿಐ ನಾಗರಾಜ, ಗ್ರಾಮೀಣ ಸಿಪಿಐ ಮಹ್ಮದ್ ಸಿರಾಜ್ ಹಾಗೂ ಪಿಎಸ್ಐ ಸತೀಶ ಮೂಲಿಮನಿ, ಗೋಗಿ ಪಿಎಸ್ಐ ಕೃಷ್ಣಾ ಸುಬೇದಾರ, ಭೀ. ಗುಡಿ ಪಿಎಸ್ಐ ತಿಪ್ಪಣ್ಣ ರಾಠೊಡ ಹಾಗೂ ಪೊಲೀಸ್ ಸಿಬ್ಬಂದಿ ಸೂಕ್ತ ಭದ್ರತೆ ಒದಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.