ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
Team Udayavani, Mar 17, 2019, 12:09 PM IST
ಕೆಂಭಾವಿ: ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಅಗಲೀಕರಣ ಕಾಮಗಾರಿ, ಕುಡಿಯುವ ನೀರಿನ ಸಮಸ್ಯೆ, ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಕೆ ಹಾಗೂ ಪುರಸಭೆ ಸಿಬ್ಬಂದಿ ವರ್ಗಾವಣೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪುರಸಭೆ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕರವೇ ಗೌರವಾಧ್ಯಕ್ಷ ಶ್ರೀಶೈಲ ಕಾಚಾಪುರ, ರಸ್ತೆ ಅಗಲೀಕರಣ ಕಾರಣದಿಂದ ಮುಖ್ಯ ಬಜಾರ ಸೇರಿದಂತೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮನೆ ಹಾಗೂ ಅಂಗಡಿಗಳನ್ನು ನೆಲಸಮ ಮಾಡಿ ಒಂದು ತಿಂಗಳುಗಳು ಗತಿಸಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ರಸ್ತೆ ಕಾಮಗಾರಿ ಕೈಗೆತ್ತಿಗೊಳ್ಳದೇ ಮೌನ ವಹಿಸಿದ್ದಾರೆ. ಇದರಿಂದ ಜನರ ನಿತ್ಯ ಸಂಚಾರಕ್ಕೆ ತೊಂದರೆಯಾಗಿದೆ. ಬೇಸಿಗೆ ಪ್ರಾರಂಭವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ನೀರಿನ ಪ್ರಮಾಣ ಪಟ್ಟಣದಲ್ಲಿ ಸಾಕಷ್ಟಿದ್ದರೂ ಅದನ್ನು ಸರಿಯಾಗಿ ಉಪಯೋಗ ಮಾಡುವ ಗೋಜಿಗೆ ಹೋಗದೆ ಅಧಿಕಾರಿಗಳು ವಿಫಲರಾಗಿದ್ದಾರೆ.
ಸುರಪುರ-ಹುನಗುಂದ ರಾಜ್ಯ ಹೆದ್ದಾರಿ ಮಧ್ಯೆ ಅಳವಡಿಸಿರುವ ವಿದ್ಯುತ್ ಜೋಡಣೆಗೆ ಸರ್ಕಾರ ಹಣ ಬಿಡುಗಡೆಗೊಳಿಸಿದ್ದರೂ ಅದನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಮತ್ತು ಟೌನ್ ಪ್ಲಾನ್ ಇಲ್ಲದೆ ಕಟ್ಟಡ ಪರವಾನಗಿ ನೀಡುತ್ತಿದ್ದು, ಇದೆಲ್ಲವನ್ನು ತನಿಖೆಗೆ ಒಳಪಡಿಸಿ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಿಯಮದಂತೆ ಶೀಘ್ರವೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಂದಾಯ ನಿರೀಕ್ಷಕ ರಾಜೇಸಾಬ್, ದೂರವಾಣಿಯಲ್ಲಿ ಆಡಳಿತಾಧಿಕಾರಿಯೂ ಆದ ಉಪ ವಿಭಾಗಾಧಿಕಾರಿ ಶಂಕರಗೌಡ ಜತೆ ಮಾತನಾಡಿ ಮಂಗಳರವಾರದವರೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ವಲಯ ಅಧ್ಯಕ್ಷ ಕುಮಾರ ಮೋಪಗಾರ, ಶಿವು ಮಲ್ಲಿಬಾವಿ, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನಸ್ವಾಮಿ, ಬಾಷಾಸಾಬ ನದಾಫ್, ಹಂಪಣ್ಣ ಮಾಲಗತ್ತಿ, ರಮೇಶ ಖಾನಾಪುರ, ಪ್ರಕಾಶ ಹೆ ಗ್ಗನದೊಡ್ಡಿ, ಅಪ್ಪಣ್ಣ ಹೆಗ್ಗನದೊಡ್ಡಿ,ಟಿಪ್ಪು ಸುಲ್ತಾನ್ ಸಂಘದ ಅಧ್ಯಕ್ಷ ಬಂದೇನವಾಜ್ ನಾಲತವಾಡ, ಇಲಿಯಾಸ್ ಪಟೇಲ್, ಚಾಂದಪಾಶಾ ಪರಸನಹಳ್ಳಿ, ಬಾಪುಗೌಡ ಏವೂರ, ಶಾಂತಯ್ಯ ಗುತ್ತೇದಾರ, ಮಲ್ಲನಗೌಡ ಕದೆಳ್ಳಿ, ವೀರೇಶ ನಾಯೊಡಿ, ದೇವು ಭಜಂತ್ರಿ ಹಾಗೂ ವಿಠ್ಠಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.