ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Team Udayavani, Jul 8, 2018, 5:39 PM IST

dvg-2.jpg

ಕೊನ್ನಾಳಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟಣದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪ್ಯಾಕೇಜ್‌ ಪದ್ಧತಿ, ಆಹಾರ ವಿತರಣೆ ಮತ್ತು ನಗದು ವರ್ಗಾವಣೆ ಕ್ರಮವನ್ನು ಕೈಬಿಡುವುದು, ಐಸಿಡಿಎಸ್‌ ಗೆ ಆಧಾರ ಕಾರ್ಡ್‌ ಕಡ್ಡಾಯಗೊಳಿಸಬಾರದು, ಖಾಸಗೀಕರಣ ಮಾಡಬಾರದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನಿಗದಿಗೊಳಿಸಬೇಕು, ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ವೇತನ ರೂ. 18 ಸಾವಿರ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನಿಗದಿಗೊಳಿಸಿ ಕಾರ್ಮಿಕರೆಂದು ಪರಿಗಣಿಸಬೇಕು, ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರ ಕಾಯಮಾತಿ, ನಿವೃತ್ತಿ ವೇತನ ರೂ. 6 ಸಾವಿರ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ ತಾಲೂಕು ಅಧ್ಯಕ್ಷೆ ಚನ್ನಮ್ಮ, ಗೌರವಾಧ್ಯಕ್ಷೆ ಗೀತಾ, ಕಾರ್ಯದರ್ಶಿ ವಸಂತಮ್ಮ, ಉಪಾಧ್ಯಕ್ಷೆ ರೇಣುಕಮ್ಮ, ಖಜಾಂಚಿ ಶಾರದಾದೇವಿ ಮಾತನಾಡಿದರು. ತಾಲೂಕಿನ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರು ಭಾಗಹಿಸಿದ್ದರು.

 ಹರಪನಹಳ್ಳಿ; ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
 
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪ್ಯಾಕೇಜ್‌ ಸಿಸ್ಟ್‌ಂ, ಆಹಾರ ವಿತರಣೆ ಮತ್ತು ನಗದು ವರ್ಗಾವಣೆ ಕ್ರಮವನ್ನು ಕೈಬಿಡಬೇಕು ಹಾಗೂ ಐಸಿಡಿಎಸ್‌ಗೆ ಅಧಾರ ಕಾರ್ಡ್‌ ಕಡ್ಡಾಯಗೊಳಿಸಬಾರದು ಮತ್ತು ಖಾಸಗೀಕರಣಗೊಳಿಸಬಾರದು. 18 ಸಾವಿರ ರೂ. ಕನಿಷ್ಠ ವೇತನವನ್ನು ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕರಿಗೆ ನೀಡಬೇಕು. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚುನಾವಣೆ ಪೂರ್ವ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ಪಿಂಚಣಿ 6 ಸಾವಿರ ರೂ. ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ವಿದ್ಯಾರ್ಹತೆ ಹಾಗೂ ಸೇವಾ ಅವಧಿ ಪರಿಗಣಿಸಿ ಸರ್ಕಾರದ ವಿವಿಧ ಇಲಾಖೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ, ಇಂಗ್ಲಿಷ್‌ ಮಾಧ್ಯಮ ಪ್ರಾರಂಭಿಸಿದರೆ ಅಂಗನವಾಡಿ ಕಾರ್ಯಕರ್ತೆಯರನ್ನೇ ನೇಮಕ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಅಂಗನವಾಡಿ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ತರಗತಿಗಳನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿದರು.

ಫೆಡರೇಷನ್‌ ಪದಾಧಿಕಾರಿಗಳಾದ ಸುಮ, ವಿಜಯಲಕ್ಷ್ಮಿ, ಸರಿತಾ, ಕೊಟ್ರಮ್ಮ, ನಾಗಲಕ್ಷ್ಮಿ, ಗುಡಿಹಳ್ಳಿ ಹಾಲೇಶ್‌, ಎಚ್‌.ಎಂ. ಕೊಟ್ರೇಶ್‌, ಎಂ. ಮಲ್ಲಿಕಾರ್ಜುನ್‌ ಮತ್ತಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.