ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Feb 19, 2022, 2:30 PM IST
ಸುರಪುರ: ನಕಲಿ ಜಾತಿ ಪ್ರಮಾಣಪತ್ರ ತಡೆಗೆ ಒತ್ತಾಯಿಸಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾ ಧಿಪತಿ ನಡೆಸುತ್ತಿರುವ ಸತ್ಯಾಗ್ರಹ ಬೆಂಬಲಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಘಟಕದಿಂದ ಪ್ರತಿಭಟಿಸಲಾಯಿತು.
ಬಳಿಕ ಸಂಘದ ಮುಖಂಡರು ಮಾತನಾಡಿ, ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಪ್ರಮಾಣ ಶೇ.3 ರಿಂದ ಶೇ.7.5 ಮೀಸಲಾತಿ ಹೆಚ್ಚಳ ಮಾಡಬೇಕು. ನ್ಯಾ| ನಾಗಮೋಹನದಾಸ್ ವರದಿ ಸಚಿವ ಸಂಪುಟದಲ್ಲಿ ಅನುಮೋದಿಸಿ ಆದೇಶ ಹೊರಡಿಸಬೇಕು. ರಾಜ್ಯದಲ್ಲಿ ಮೀಸಲಾತಿ ಶೇ.3 ಜಾರಿಯಲ್ಲಿದೆ. ನಮ್ಮದು 75 ಲಕ್ಷ ಜನಸಂಖ್ಯೆಯುಳ್ಳ ದೊಡ್ಡ ಸಮುದಾಯವಾಗಿದ್ದು ಇಲ್ಲಿವರೆಗೆ ಆಡಳಿತಕ್ಕೆ ಬಂದ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸದೇ ಸಮುದಾಯಕ್ಕೆ ಅನ್ಯಾಯ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಕಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಲಾಗುತ್ತಿದ್ದು ಅದನ್ನು ತಡೆಯಬೇಕು. ಕೆಲವರಿಗೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡಲಾಗಿದ್ದು, ಅಂತಹ ಅ ಧಿಕಾರಿಗಳ ವಿರುದ್ಧ ದೂರು ದಾಖಲಿಸಿ ಅವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ ನಾಯಕ, ಕಾರ್ಯಾಧ್ಯಕ್ಷ ರಮೇಶ ದೊರೆ ಆಲ್ದಾಳ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬೇಟೆಗಾರ, ಮುಖಂಡರಾದ ಜಿ. ತಮ್ಮಣ್ಣ, ರಾಮು ನಾಯಕ ಅರಳಹಳ್ಳಿ, ಬಸವರಾಜ ನಾಯಕ ಹೆಮ್ಮಡಗಿ, ಕನಕಾಚಲ ನಾಯಕ ಜಹಗೀರದಾರ್, ಪರಮಣ್ಣ ವಚಕೇರಿ, ಬುಚ್ಚಪ್ಪ ನಾಯಕ, ಭೀಮಣ್ಣ ದೊರೆ ಮಾಲಗತ್ತಿ, ವೈ.ಬಿ. ದೇಸಾಯಿ, ಶ್ರೀನಿವಾಸ ನಾಯಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.