ರೈಲೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ
ಶೋಷಿತ ಸಮುದಾಯಗಳು ಉದ್ಯೋಗ ಮತ್ತು ಶಿಕ್ಷಣದಿಂದ ವಂಚಿತವಾಗಿವೆ
Team Udayavani, May 23, 2022, 5:57 PM IST
ಯಾದಗಿರಿ: ಪರಿಶಿಷ್ಟ ಜಾತಿ ಪರಿಶಿಷ್ಟ ಜನಾಂಗದವರಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಳಕ್ಕಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ನಗರದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರತಿಭಟನೆ ಮೂಲಕ ರೈಲ್ವೆ ನಿಲ್ದಾಣ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಕಾರರಿಗೆ ನಗರಠಾಣೆ ಪೊಲೀಸರು ಮತ್ತು ರೈಲ್ವೆ ಪೊಲೀಸರು ಬ್ಯಾರಿಕೇಡ್ ಹಾಕಿ ನಿಲ್ದಾಣದ ಹೊರಗಡೆ ತಡೆದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರು ಮತ್ತು ಪೊಲೀಸರ ಮಧ್ಯೆ ಸುಮಾರು ಅರ್ದ ಗಂಟೆ ತಳ್ಳಾಟ ನೂಕಾಟ ವಾಗ್ವಾದ ನಡೆಯಿತು. ಕೊನೆಗೂ ಪೊಲೀಸರು ಹೊರಗಡೆ ಶಾಂತರೀತಿಯಿಂದ ಧರಣಿ ಕುಳಿತು ಪ್ರತಿಭಟಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲು ಅವಕಾಶ ಮಾಡಿಕೊಟ್ಟರು.
ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ ಮೊಗ್ಧಂಪೂರ ಮಾತನಾಡಿ, ಮೀಸಲಾತಿ ಹೆಚ್ಚಳಕ್ಕಾಗಿ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಪ್ರೀಡ್‌ಂ ಪಾರ್ಕನಲ್ಲಿ ಕಳೆದ 100 ದಿನಗಳಿಂದ ಎಸ್‌ಟಿ ಜನಾಂಗಕ್ಕೆ ಶೇ. 3ರಿಂದ 7.5 ಹೆಚ್ಚಳ ಮತ್ತು ಎಸ್‌ಸಿ ಜನಾಂಗಕ್ಕೆ ಶೇ 15ರಿಂದ ಶೇ 17ಕ್ಕೆ ಹೆಚ್ಚಳ ಮಾಡುವಂತೆ ಅಹೋರಾತ್ರಿ ಮಳೆ ಗಾಳಿಯನ್ನದೇ ಧರಣಿ ಕುಳಿತು ನ್ಯಾಯಬದ್ಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಜನಸಂಖ್ಯೆ 70 ಲಕ್ಷದಷ್ಟಿದ್ದು, ಮೀಸಲಾತಿ ಪ್ರಮಾಣ ಕೇವಲ ಶೇ 3ರಷ್ಟಿದೆ 51 ಜಾತಿಗಳನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಇದರಿಂದ ಶೋಷಿತ ಸಮುದಾಯಗಳು ಉದ್ಯೋಗ ಮತ್ತು ಶಿಕ್ಷಣದಿಂದ ವಂಚಿತವಾಗಿವೆ ಎಂದು ದೂರಿದರು.
ಬಿಎಸ್‌ಪಿ ಮುಖಂಡ ಕೆ.ಬಿ. ವಾಸು ಮಾತನಾಡಿ, ಎಸ್‌ಸಿಪಿಟಿಎಸ್‌ಪಿ ಕಾಯಿದೆ 2013ರ ಕಲಂ 7ಡಿ ಅನ್ನು ರದ್ದುಗೊಳಿಸಬೇಕು. ರಾಜ್ಯದಲ್ಲಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿಪ್ರಮಾಣ ಪತ್ರ ಪಡೆಯುತ್ತಿರುವ ಮತ್ತು ವಿತರಿಸುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ| ರವೀಂದ್ರನಾಥ ಅವರ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಮುಖಂಡರಾದ ಸುದರ್ಶನ ನಾಯಕ, ಕಾಶೀನಾಥ, ಟಿ.ಎನ್. ಭೀಮುನಾಯಕ, ಭೀಮರಾಯ ಠಾಣಗುಂದಿ, ಪ್ರಭು ಬಕ್ಕಲ್, ಮಾತನಾಡಿದರು. ಪ್ರತಿಭಟನೆಯಲ್ಲಿ ನಿವೃತ ತಹಶೀಲ್ದಾರ್ ಸಿದ್ದಲಿಂಗಪ್ಪ ನಾಯಕ, ಮಲ್ಲು ಮಾಳಿಕೇರಿ, ಹಣಮಂತ ನಾಯಕ ಖಾನಳ್ಳಿ, ಚಂದ್ರಕಾಂತ ಹತ್ತಿಕುಣಿ, ವೀರಪ್ಪ ಪ್ಯಾಟಿ, ಯಂಕಪ್ಪರಾಠೊಡ, ಭೀಮಶಂಕರ ಅಲ್ದಾಳ, ಶರಣಪ್ಪ ಜಾಕನಳ್ಳಿ, ಸಾಹೇಬಗೌಡ ಗೌಡಿಗೇರಾ, ಬಂಗಾರೆಪ್ಪ, ಚಂದಪ್ಪ ರಾಮಸಮುದ್ರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.