ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ: ಡಾ| ರಾಗಪ್ರಿಯಾ

Team Udayavani, Feb 22, 2022, 12:44 PM IST

18dc

ಯಾದಗಿರಿ: ಯುವಶಕ್ತಿ ದೇಶದ ಶಕ್ತಿ, ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ತರಬೇತಿ ಕಾರ್ಯಕ್ರಮ ರೂಪಿಸುವುದರಿಂದ ಯುವಕರ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಘ- ಸಂಸ್ಥೆಗಳ ಹಾಗೂ ಯುವನೀತಿ ಸಮಿತಿ ಸದಸ್ಯರನ್ನು ಒಳಗೊಂಡ ಸ್ಟೇಕ್‌ ಹೋಲ್ಡರ್ಸ್‌ ಸಭೆ ನಡೆಸಿ ಅವರು ಮಾತನಾಡಿದರು.

ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಮತ್ತು ಉದ್ಯೋಗ ಪಡೆಯಲು ಇರುವ ಅವಕಾಶಗಳ ಬಗ್ಗೆ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮಾಂತರ ಪ್ರದೇಶಗಳ ಯುವತಿಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕಾರ್ಯಕ್ರಮ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನರೇಗಾ ಯೋಜನೆ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿ ಕ್ರೀಡಾ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಮೀಸಲಿಟ್ಟು ಜಿಪಂ ವತಿಯಿಂದ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳಿ. ಯುವ ಜನತೆ ಕ್ರೀಡೆ ಮತ್ತು ಇತರೆ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯುವಕ-ಯುವತಿ ಸಂಘದ ನೋಂದಣಿ ಮತ್ತು ನವೀಕರಣ ವಿಧಾನ ಸರಳವಾಗಿಸುವುದು, ಈ ಮೊದಲು ಜಾರಿಯಲ್ಲಿದ್ದ ಜಿಲ್ಲಾ ಯುವ ಪ್ರಶಸ್ತಿ, ಗ್ರಾಮೀಣ ಕ್ರೀಡೋತ್ಸವ ಮತ್ತು ಗ್ರಾಮಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಪುನರ್‌ ಆರಂಭಿಸಲು ಅಗತ್ಯವಿರುವ ನಿಯಾಮಾವಳಿ ಯುವ ನೀತಿಯಲ್ಲಿ ಅಳವಡಿಸಲು ಭಾಗವಹಿಸಿದ ಸಂಘ-ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಹಬ್‌ ಕಾರ್ಯಗತಗೊಳಿಸಿ ಉದ್ಯೋಗಾವಕಾಶ ಸೃಷ್ಟಿಸುವ ಯೋಜನೆ, ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಜಾರಿಗೊಳಿಸಲಾಗುತ್ತಿದೆ. ಇತರೆ ಸಂಸ್ಥೆಗಳ ಮೂಲಕ ಉದ್ಯೋಗ ಮೇಳ ಆಯೋಜಿಸಿ ಯುವಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ವೇಳೆ ಎಸ್ಪಿ ಸಿ.ಬಿ. ವೇದಮೂರ್ತಿ, ಜಿಪಂ ಸಿಇಒ ಅಮರೇಶ ಆರ್‌., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್‌., ಸಂಘ-ಸಂಸ್ಥೆಯ ಪ್ರತಿನಿಧಿಗಳಾದ ಆನಂದ ರಾಠೊಡ್‌, ಭೀಮರಾಯ ವಡವಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.