ಅರ್ಹರಿಗೆ ಆಯುಷ್ಮಾನ್ ಕಾರ್ಡ್ ಒದಗಿಸಿ
Team Udayavani, Oct 24, 2020, 6:11 PM IST
ಯಾದಗಿರಿ: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ಬರುವಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಒದಗಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್. ನಿರ್ದೇಶನ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಇ-ಆಸ್ಪತ್ರೆ ಹಾಗೂ ಇ-ಸಂಜೀವಿನಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರ್ಹರಿಗೆ ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ಮುದ್ರಿಸಿ ನೀಡುವ ವ್ಯವಸ್ಥೆ ಮಾಡಬೇಕು, ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ನೀಡಿದ್ದಲ್ಲಿ ಬರುವ ಎರಡು ತಿಂಗಳಲ್ಲಿ ಅರ್ಹರೆಲ್ಲರಿಗೂ ಆಯುಷ್ಮಾನ್ ಕಾರ್ಡ್ ತಲುಪಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಪಂಗಳಲ್ಲಿ ಹಾಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಬರುವ ಅರ್ಹರಿಗೆ ಈ ಕಾರ್ಡ್ ಒದಗಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.
ಈ ವೇಳೆ ಜಿಪಂ ಸಿಇಒ ಶಿಲ್ಪಾ ಶರ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿ ಕಾರಿ ಡಾ| ಭಗವಂತ ಅನ್ವರ್, ಡಾ| ಸಂಜೀವ ಕುಮಾರ್ ಸೇರಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿ ಕಾರಿಗಳು ಇದ್ದರು.
ಚನ್ನಮ್ಮ ಕೆಚ್ಚೆದೆಯ ಹೋರಾಟಗಾರ್ತಿ :
ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ಕನ್ನಡದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವ ಸರಳವಾಗಿ ಆಚರಿಸಲಾಯಿತು.
ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ್ಯ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರು ರಾಣಿ ಚನ್ನಮ್ಮ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗೆ ಬ್ರಿಟಿಷರ ವಿರುದ್ಧ ಮಾಡಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸದಿಂದ ಚನ್ನಮ್ಮ ಅಜರಾಮರವಾಗಿದ್ದಾಳೆ ಎಂದರು. ಜಯಂತಿ ನಿಮಿತ್ತ ರಾಣಿ ಚನ್ನಮ್ಮ ಭಾವಚಿತ್ರಕ್ಕೆ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಪೂಜೆ ಸಲ್ಲಿಸಿದರು. ಈ ವೇಳೆ ಮಲ್ಲು ಮಾಳಿಕೇರಿ, ಅರ್ಜುನ ಪವಾರ್, ರಿಯಾಜ್ ಪಟೇಲ್, ದೀಪಕ ಒಡೆಯರ್, ಅಬ್ದುಲ್ ಅಜೀಜ್, ಕಾಶಿನಾಥ ನಾನೇಕ, ಸಾಬಣ್ಣ ಬಡಿಗೇರ, ಮರೆಪ್ಪ, ಶರಣು ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.