ಎಪಿಎಂಸಿ-ರೈತ ಭವನಕ್ಕೆ ಸೌಕರ್ಯ ಕಲ್ಪಿಸಿ
Team Udayavani, Sep 25, 2020, 6:43 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ಬಸವೇಶ್ವರ ಗಂಜ್ ಆವರಣದಲ್ಲಿ ಮತ್ತು ರೈತ ಭವನದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಎರಡು ವಾರದಲ್ಲಿ ಸಮಸ್ಯೆ ಇತ್ಯರ್ಥ ಪಡಿಸದಿದ್ದರೆ ತಮ್ಮ ಕಚೇರಿ ಎದುರು ಹೋರಾಟ ಮಾಡಲಾಗುವುದು ಎಂದು ನವ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
ರೈತ ಸಂಘದ ಕಾರ್ಯಕರ್ತರು ಎಪಿಎಂಸಿಗೆ ಆಗಮಿಸಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ರಾಜುಗೌಡ ಚಾಮನಳ್ಳಿ, ಯಾದಗಿರಿ ನಗರದಲ್ಲಿರುವ ಬಸವೇಶ್ವರ ಗಂಜ್, (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಆವರಣದಲ್ಲಿ ಮತ್ತು ರೈತ ಭವನದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವುದು ನಮ್ಮ ಸಂಘಟನೆಯ ನಿಯೋಗ ಎಪಿಎಂಸಿಗೆ ಭೇಟಿ ನೀಡಿದಾಗ ಕಂಡುಬಂದಿದೆ. ರೈತ ಭವನದಲ್ಲಿ ಧೂಳು ತುಂಬಿದ್ದು, ಬಳಕೆಯೇ ಇಲ್ಲ ಎಂಬುದನ್ನು ಸಾರಿ ಹೇಳುತ್ತಿದೆ. ಭವನದಲ್ಲಿ ಕುಡಿವ ನೀರಿನ ವ್ಯವಸ್ಥೆಯೂ ಇಲ್ಲ. ಫ್ಯಾನ್‌ಗಳಿಗೆ ರೆಕ್ಕೆಯೇ ಇಲ್ಲ ಹೀಗೆ ಹತ್ತು ಹಲವು ಸಮಸ್ಯೆಗಳ ಗೂಡಾಗಿರುವ ರೈತ ಭವನಕ್ಕೆ ತಕ್ಷಣ ಕಾಯಕಲ್ಪ ನಿಡಬೇಕು. ಮತ್ತು ಭವನವನ್ನು ರೈತರ ಉಪಯೋಗಿಯಾಗಿಸಬೇಕು ಎಂದು ಆಗ್ರಹಿಸಿದರು.
ಇನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ದನದ ಸಂತೆ ವಾರಕ್ಕೊಮ್ಮೆ ನಡೆಯುತ್ತಿದ್ದು ಇಲ್ಲಿಯೂ ಸಹ ಯಾವುದೇ ಮೂಲ ಸೌಕರ್ಯಗಳು ಇಲ್ಲ. ತಕ್ಷಣವೇ ವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಮಾರುಕಟ್ಟೆಗೆ ತಂದಬೆಳೆಯನ್ನು ಸಮಿತಿಗೆ ಸಲ್ಲಿಸಲು ಎಪಿಎಂಸಿಯಿಂದ ನೀಡುವ ಟೆಂಡರ್ ಫಾರಂಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು. ಶೀಘ್ರ ಸಮಸ್ಯೆ ಇತ್ಯರ್ಥವಾಗದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು. ಎಪಿಎಂಸಿ ಕಾರ್ಯದರ್ಶಿ ಸುಮಂಗಲಾ, ಅಧ್ಯಕ್ಷ ಬಸಲಿಂಗಪ್ಪ ನಾಯಕ ಮನವಿ ಸ್ವೀಕರಿಸಿ, 15 ದಿನಗಳಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ರೈತ ಸಂಘಟನೆ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.