ಅಟಲ್ ಜೀ ಆಪರೇಟರ್‌ಗಳಿಗೆ ಸೇವಾ ಭದ್ರತೆ ನೀಡಿ
Team Udayavani, Feb 7, 2022, 2:59 PM IST
ಗುರುಮಠಕಲ್: ಸುಮಾರು 14 ವರ್ಷಗಳಿಂದ ಅತ್ಯಂತ ಕಡಿಮೆ ಗೌರವಧನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಆದ ಕಾರಣ ರಾಜ್ಯ ಸರ್ಕಾರ ದಯವಿಟ್ಟು ಅಟಲ್ ಜೀ ಜನಸ್ನೇಹಿ ಕೇಂದ್ರಗಳನ್ನು ಮುಂದುವರಿಸಿ ನಮಗೆ ಸೇವಾ ಭದ್ರತೆ ನೀಡಬೇಕೆಂದು ಯಾದಗಿರಿ ಜಿಲ್ಲೆಯ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಆಪರೇಟರ್‌ಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನಾಡ ಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಡೇಟಾ ಎಂಟ್ರಿ ಆಪರೇಟರ್ ಗಳಿಗೆ ರಾಜ್ಯ ಸರ್ಕಾರ ಯಾವುದೇ ಸೇವಾ ಭದ್ರತೆ ನೀಡುತ್ತಿಲ್ಲ. 1222 ಡೇಟಾ ಎಂಟ್ರಿ ಆಪರೇಟರ್‌ಗಳ ಕುಟುಂಬಗಳು ಇದನ್ನೇ ಅವಲಂಬಿಸಿವೆ. ಹಲವಾರು ವರ್ಷಗಳಿಂದ ಕಂದಾಯ ಇಲಾಖೆಯ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ಗಳಾಗಿ ದುಡಿಯುತ್ತಿದ್ದೇವೆ. ಅದರ ಫಲವಾಗಿ ರಾಜ್ಯದ ಪರವಾಗಿ ಆಯುಕ್ತರು ರಾಷ್ಟ್ರಮಟ್ಟದ ಪ್ರಶಸ್ತಿ ಸೀಕರಿಸಿದ್ದಾರೆ ಎಂದು ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಆಪೇಟರ್‌ಗಳು ಹೆಮ್ಮೆಯಿಂದ ಹೇಳಿದರು.
ಅಟಲ್‌ಜೀ ಜನಸ್ನೇಹಿ ಕೇಂದ್ರ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾವು ಸರ್ಕಾರದ ವಿವಿಧ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಸೇವೆ ನೀಡಿರುವುದರಲ್ಲಿ ಸಾರ್ವಜನಿಕರ ಪ್ರಶಂಸೆ, ಪಾರದರ್ಶಕತೆಗೆ ಹೆಸರುವಾಸಿಯಾಗಿದ್ದು, ಇದರ ಜೊತೆಗೆ ಕೋವಿಡ್-19 ಮಹಾಮಾರಿಯಂತಹ ತುರ್ತು ಸಂದರ್ಭದಲ್ಲಿ ಫ್ರೆಂಟ್ ಲೈನ್ ವಾರಿಯರ್ಸ್ ಆಗಿ ಟೋಲ್ ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್ ರೂಮ್, ಸ್ಥಳೀಯ ಮಟ್ಟದ ಚುನಾವಣೆಯಿಂದ ಲೋಕಸಭಾ ಚುನಾವಣೆಯ ಕರ್ತವ್ಯಗಳನ್ನು ಹಗಲು-ರಾತ್ರಿ ನಿರ್ವಹಿಸುವುದರ ಜೊತೆಗೆ ಬೆಳೆ ಸಮೀಕ್ಷೆ ಮಾಡಿದ್ದೇವೆ.
ನಮ್ಮ ಈ ಸಾಮರ್ಥ್ಯ, ಸೇವೆಯನ್ನು ಮೆಚ್ಚಿ ಆಯೋಗ ಇನ್ನು ಹೆಚ್ಚಿನದಾಗಿ ವಿವಿಧ 800 ಸೇವೆಗಳನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರದಿಂದಲೇ ನೀಡಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಹೀಗಿರುವಾಗ ಸತತವಾಗಿ 14 ವರ್ಷಗಳಿಂದ ನೆಮ್ಮದಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅಲ್ಪ ಮೊತ್ತದ ಗೌರವ ಧನದಲ್ಲೇ ಜೀವನ ನಡೆಸುತ್ತಿದ್ದು, ವಯೋಮಿತಿ ಮೀರಿದ್ದು ನಮ್ಮೆಲ್ಲರ ಜೀವನ ದುಸ್ತರವಾಗಿರುತ್ತದೆ ಎಂದು ಯಾದಗಿರಿ ಅಪಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಜಿಲ್ಲಾ ಸಂಯೋಜಕ ಮಧುಸುದನ ಗುರು, ಶ್ರೀನಿವಾಸರೆಡ್ಡಿ ಪತ್ತಿ, ಗೌಡಪ್ಪ ಗೌಡ, ಭೀಮರೆಡ್ಡಿ ಹೈಯಾಳ್, ಇಮ್ರಾನ್, ಜಗಲಿಂಗು, ವೀರಣ್ಣ, ಭೀಮರೆಡ್ಡಿ, ಸಂತೋಷ, ಅನೀಲ್ ಕುಮಾರ ಇದ್ದರು.
ಹತ್ತು ವರ್ಷಗಳಿಂದ ರಾಜ್ಯಾದ್ಯಂತ ನಾಡ ಕಚೇರಿಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಯಾವುದೇ ಸೇವಾ ಭದ್ರತೆ ಇಲ್ಲದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾವಿರಾರು ಆಪರೇಟರ್ ಗಳ ಕುಟುಂಬಗಳು ಬೀದಿಪಾಲಾಗದಂತೆ ಕರ್ತವ್ಯದಲ್ಲಿ ಮುಂದುವರಿಸುವುದರ ಜೊತೆಗೆ ಸೇವಾ ಭದ್ರತೆ ನೀಡಿ ಸೇವೆ ಸಲ್ಲಿಸಲು ಅನುವು ಮಾಡಿಕೊಡಬೇಕು. -ಶ್ರೀನಿವಾಸ್ ರೆಡ್ಡಿ, ಪತ್ತಿ ಡೇಟಾ ಎಂಟ್ರಿ ಆಪರೇಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.