ನಿಖರ ಜನಗಣತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ
ಜನಗಣತಿ ಕ್ಷೇತ್ರ ತರಬೇತಿದಾರರಿಗೆ ಮಾಸ್ಟರ್ ಟ್ರೇನರ್‌ಗಳಿಂದ ತರಬೇತಿ
Team Udayavani, Mar 14, 2020, 2:01 PM IST
ಯಾದಗಿರಿ: ಸಾಮಾನ್ಯ ವ್ಯಕ್ತಿ ಅನುಕೂಲತೆಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ರಚಿಸಲು ಮತ್ತು ಅನುದಾನ ಬಿಡುಗಡೆಗೆ ಜನಗಣತಿ ಮೂಲ ಆಧಾರವಾಗುತ್ತದೆ. ನಿಖರ ಜನಗಣತಿಯಿಂದ ಬಲಿಷ್ಠ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮನೆಪಟ್ಟಿ ಮತ್ತು ಮನೆಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಕ್ಷೇತ್ರ ತರಬೇತುದಾರರಿಗೆ ಮಾಸ್ಟರ್ ಟ್ರೇನರ್‌ಗಳಿಂದ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜನಗಣತಿಯಲ್ಲಿ ಸಂಗ್ರಹಿಸಿದ ಮಾಹಿತಿ ಆಧಾರ ಮೇಲೆ ಲೋಕಸಭೆ, ವಿಧಾನಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳ ಸ್ಥಾನಗಳು ನಿರ್ಧಾರವಾಗುತ್ತವೆ. 2021ರ ಜನಗಣತಿ ಅಂಕಿ-ಅಂಶಗಳು ಮುಂದಿನ 10 ವರ್ಷಗಳ ವರೆಗೆ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗವಾಗುತ್ತವೆ ಎಂದು ತಿಳಿಸಿದರು.
ಕ್ಷೇತ್ರ ತರಬೇತಿದಾರರು ಜನಗಣತಿಗೆ ಸಂಬಂಧಪಟ್ಟ ಆ್ಯಪ್‌ಗ್ಳನ್ನು ಇನ್‌ಸ್ಟಾಲ್ ಮಾಡಿಕೊಳ್ಳಬೇಕು. ಯಾವುದೇ ಸಂಶಯಗಳನ್ನು ಇಟ್ಟುಕೊಂಡು ಜನಗಣತಿಗೆ ಹೋದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕಾರಣ ತರಬೇತಿಯಲ್ಲಿ ನೀಡುವ ಪ್ರತಿಯೊಂದು ಅಂಶಗಳನ್ನು ಗಮನವಿಟ್ಟು ಆಲಿಸಬೇಕು. ಸಂಶಯಗಳಿದ್ದಲ್ಲಿ ಪರಿಹರಿಸಿಕೊಳ್ಳಬೇಕು. ಜನಗಣತಿ ಬಗ್ಗೆ ಪೂರ್ವಾಭ್ಯಾಸ ಮಾಡಿ, ಸ್ವತಃ ಅನುಭವ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂರ ಮಾತನಾಡಿ, ಜನಗಣತಿ ರಾಷ್ಟ್ರೀಯ ಕಾರ್ಯವಾಗಿದೆ. ಜನಗಣತಿ ಕಾರ್ಯಕ್ಕೆ ನೇಮಕವಾದ ಪ್ರತಿಯೊಬ್ಬ ಅಧಿಕಾರಿಗಳು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಜನಗಣತಿ ಜಿಲ್ಲಾ ನೋಡಲ್ ಅಧಿಕಾರಿ ಗೆಜ್ಜೆ ಗೋಪಾಲಕೃಷ್ಣ ಮಾತನಾಡಿ, 2020ರ ಏಪ್ರಿಲ್ 15ರಿಂದ ಮೇ 29ರ ವರೆಗೆ ಮನೆಪಟ್ಟಿ ಮತ್ತು ಮನೆಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ಪಟ್ಟಿಯ ಪರಿಷ್ಕರಣೆ ನಡೆಯಲಿದೆ. 2021ರ ಫೆಬ್ರುವರಿ 9ರಿಂದ ಫೆ.28ರ ವರೆಗೆ ಜನಗಣತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಾಸ್ಟರ್ ಟ್ರೇನರ್‌ಗಳಾದ ಪ್ರಹ್ಲಾದ್ ಜೋಶಿ ಮತ್ತು ಸಿದ್ದಣ್ಣ ಡಿಗ್ಗಿ ತರಬೇತಿ ನೀಡಿದರು. ಕ್ಷೇತ್ರ ತರಬೇತುದಾರರಿಗೆ ನೀಡಿರುವ ಕೈಪಿಡಿಗಳಲ್ಲಿ ಮನೆಪಟ್ಟಿ ಮತ್ತು ಮನೆಗಣತಿ ಹಾಗೂ ಜನಗಣತಿ ಬಗ್ಗೆ ವಿವರವಾದ ಮಾಹಿತಿಗಳನ್ನು ನೀಡಲಾಗಿದೆ. ಅವುಗಳನ್ನು ಓದಿ ಸರಿಯಾಗಿ ಅರ್ಥೈಸಿಕೊಳ್ಳಬೇಕು. ಯಾವುದೇ ಅನುಮಾನಗಳಿದ್ದಲ್ಲಿ ಸ್ಪಷ್ಟೀಕರಣ ಪಡೆಯಲು ಹಿಂಜರಿಯಬಾರದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.