ಯುವಕರ ಆಶೋತ್ತರ ಈಡೇರಿಸಲು ಸಿದ್ಧ
Team Udayavani, Apr 30, 2022, 2:46 PM IST
ಸೈದಾಪುರ: ಮತಕ್ಷೇತ್ರದ ಯುವಕರ ಆಶೋತ್ತರಗಳನ್ನು ಈಡೇರಿಸಲು ಸದಾ ಸಿದ್ಧ ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಅಭಯ ನೀಡಿದರು. ಪಟ್ಟಣದಲ್ಲಿ ಹಮ್ಮಿಕೊಂಡಿದ್ದ 3ನೇ ಆವೃತ್ತಿಯ ಎಸ್‌ಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಯುವಕರ ನೇತೃತ್ವದಲ್ಲಿ ಹಮ್ಮಿಕೊಳ್ಳುವ ಸಮಾಜಮುಖೀ ಕಾರ್ಯಕ್ರಮಗಳು ಆದಿಯಾಗಿ ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಗೆ ತಮ್ಮ ಸಹಾಯ, ಸಹಕಾರ ನಿರಂತರವಾಗಿ ಇರುತ್ತದೆ ಎಂದು ಭರವಸೆ ನೀಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮೂಲಕ ಕ್ರೀಡಾ ನಿಯಮಗಳಿಗೆ ಬದ್ಧರಾಗಿರಬೇಕು. ಕ್ರೀಡೆಯಿಂದ ದೈಹಿಕ ಸದೃಢತೆಯ ಜತೆಗೆ ಮಾನಸಿಕ ಸಾಮಾರ್ಥ್ಯವೂ ಹೆಚ್ಚಳವಾಗಲಿದೆ ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.
ಇದಕ್ಕೂ ಮುನ್ನ ಟೀಮ್ ಎಸ್‌ಎನ್‌ಕೆ ವತಿಯಿಂದ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕ್ರೀಡೆ ಮಾನವನ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಕ್ರಿಕೆಟ್ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ವಿದ್ಯಾ ವರ್ಧಕ ಸಂಘದ ಕೋಶಾಧ್ಯಕ್ಷ ಮುಖಂದಕುಮಾರ ಅಲಿಝಾರ್, ಚಂದ್ರುಗೌಡ ಸೈದಾಪುರ, ರಾಜೇಶ ಶೆಟ್ಟಿ, ಚನ್ನಪ್ಪಗೌಡ ಹುಣಸೆಮರ, ಸಂಗರೆಡ್ಡಿಗೌಡ, ಗ್ರಾಪಂ ಅಧ್ಯಕ್ಷ ಮಾಳಪ್ಪ ಅರಿಕೇರಿ, ನರಸಪ್ಪ ಕವಡೆ, ಡಿ. ತಾಯಪ್ಪ, ವೆಂಕೋಬಾ ತುರಕಾನದೊಡ್ಡಿ, ಶಂಕರಲಿಂಗ ಕಡೇಚೂರು, ಗ್ರಾಪಂ ಸದಸ್ಯ ಪರ್ವತರೆಡ್ಡಿಗೌಡ, ಶಾಂತಪ್ಪ ರಾಂಪುರ, ಆನಂದ ಮಿರಿಯಾಲ್, ವೆಂಕಟೇಶ ಗಡದ್, ನರಸಪ್ಪ ಕವಡೆ, ಅಂಜನೇಯ ಮಲ್ಹಾರ್, ದೇವು ಘಂಟಿ, ಶಿವು ಸಾವೂರು, ಮಹೇಶ ವಡವಟ್, ಭೀಮಣ್ಣ ವಡವಟ್, ಯಲ್ಲಪ್ಪ ನಾಯಕ್, ಅವಿನಾಶ ಮನ್ನೆ, ವಿನೋದ ಐರೆಡ್ಡಿ, ದೀಪಕ್ ದೇವ್, ಅಂಜನೇಯ ಕಲಾಲ್, ಸೋಮು ಸ್ವಾಮಿ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.