30 ರಿಂದ ಭತ್ತ ಖರೀದಿಗೆ ನೋಂದಣಿ ಆರಂಭ
Team Udayavani, Nov 15, 2020, 4:17 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಜಿಲ್ಲೆಯಲ್ಲಿ ಐದು ನೋಂದಣಿ ಕೇಂದ್ರ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಯಾದಗಿರಿ, ಸುರಪುರ ಹಾಗೂ ಶಹಾಪುರದ ಎಂಪಿಎಂಸಿಗಳಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೇಡಿಕೆ ಮೇರೆಗೆ ಈ ಬಾರಿ ಹೆಚ್ಚುವರಿಯಾಗಿ ನಾಯ್ಕಲ್ ಹಾಗೂ ವಡಗೇರಾಗಳಲ್ಲಿ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ರೈತರು ನ. 30 ರಿಂದ ಡಿಸೆಂಬರ್ 30ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರಸ್ತುತ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಆದೇಶಿಸಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜುನಿಗಮ ನಿಯಮಿತದಿಂದ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್ ಗೆ 1868 ರೂ. ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಲ್ ಗೆ 1888 ರೂ. ಬೆಲೆಯಲ್ಲಿ ಖರೀದಿಸಲಾಗುವುದು. ಖರೀದಿಗೆ ಹಲವು ಮಾರ್ಗಸೂಚಿಗಳು ನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆ ಅನುಷ್ಠಾನಗೊಳಿಸಿ :
ಯಾದಗಿರಿ: ಜನ ಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರದಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಅವುಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರ ವೇತನ ಸೇರಿದಂತೆ ವಿವಿಧ ಯೋಜನೆಗಳಡಿ ಸರ್ಕಾರ ಅರ್ಹರಿಗೆ ಪ್ರತಿ ತಿಂಗಳು ಪಿಂಚಣಿ ನೀಡುತ್ತಿದೆ. ಈ ಯೋಜನೆಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಯಾವುದೇ ವಿಳಂಬಕ್ಕೆ ಆಸ್ಪದ ನೀಡದಂತೆ ಅರ್ಹರಿಗೆ ಸರ್ಕಾರದ ಸೌಲಭ್ಯ ತಲುಪಿಸುವಂತೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ತಹಶೀಲ್ದಾರರು, ಕಂದಾಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.