ಕಲಿಯುಗದಲ್ಲಿ ವಿಧ್ವಂಸಕ ಪ್ರವೃತ್ತಿ

ಜ| ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ಸೂಗೂರೇಶ್ವರ ಶಿವಾಚಾರ್ಯ ಶ್ರೀ ಕಳವಳ

Team Udayavani, Mar 28, 2021, 8:44 PM IST

Untitled-1

ಯಾದಗಿರಿ: ಹಿಂದಿನ ಯುಗದ ಆಚಾರ- ವಿಚಾರಕ್ಕೂ ಈಗಿನ ಕಾಲಕ್ಕೂ ಅಜಗಜಾಂತರ ವ್ಯತ್ಯಾಸವಿದ್ದು ಕಲಿಯುಗದಲ್ಲಿ ವಿಧ್ವಂಸಕ ಪ್ರವೃತ್ತಿ ಮುಂದುವರಿದಿದೆ ಎಂದು ಶಹಾಪುರದ ಕುಂಬಾರಗೇರಿ ಹಿರೇಮಠದ ಸೂಗೂರೇಶ್ವರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿಯ ಯುಗಮಾನೋತ್ಸವ ಹಾಗೂ ಪಂ.ಲಿಂ| ಜಿ.ಎಂ. ಗುರುಸಿದ್ದ ಶಾಸ್ತ್ರಿಗಳ ಸ್ಮರಣೋತ್ಸವದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ತಪ್ಪನ್ನು ಸಮರ್ಥನೆ ಮಾಡಿಕೊಂಡು ಅದೇ ಸತ್ಯ ಎಂದು ಪ್ರತಿಪಾದನೆ ಮಾಡುವ ಕಾಲವಿದ್ದು, ಪ್ರತಿಯೊಬ್ಬರೂ ಸರಿದಾರಿಯಲ್ಲಿ ಜೀವನ ಸಾಗಿಸಬೇಕು ಎಂದು ಸಲಹೆ ನೀಡಿದರು.

ಜಗದ್ಗುರು ರೇಣುಕಾಚಾರ್ಯರು 4 ಸಾವಿರ ವರ್ಷಗಳ ಹಿಂದೆಯೇ ಕಾಯಕ ದಾಸೋಹ, ಜಂಗಮ ಸೇವೆಗಳ ಮಠ-ಮಾನ್ಯ ಪರಂಪರೆ ಡಿಂಡಿಮಾರ್ಯರು ಅನುಸರಿಸುತ್ತಿದ್ದುದರ ಬಗ್ಗೆ ವೀರಾಗಮಗಳನ್ನು ಉಲ್ಲೇಖೀಸಿ ಹಿರಿಯ ಸಾಹಿತಿಗಳೂ ಶಿವಾಚಾರ್ಯರಾದ ಜಚನಿ ವಿವರಿಸಿದ್ದಾರೆ ಎಂದರು. ಪ್ರಾಚೀನ ಕಾಲದಲ್ಲಿಯೇ ಮಠಗಳನ್ನು ನಿರ್ಮಿಸಿ, ದಾಸೋಹ, ಅನುಭವ ಮಂಟಪ, ಧರ್ಮ ಸಂದೇಶ, ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರÂ ಹಾಗೂ ಅಸ್ಪೃಶ್ಯತೆ ನಿವಾರಣೆ ಸಂದೇಶ ಸಾರಿದ್ದಾರೆ ಎಂದರು.

ಮಾತಂಗ ಋಷಿ ಮತ್ತು ಬೆಂಬಲಿಗರಿಗೆ ರೇಣುಕಾಚಾರ್ಯರು ಸಂಸ್ಕಾರ ನೀಡಿ ಎಲ್ಲರನ್ನು ಮೇಲಕ್ಕೆತ್ತಿ ಉದ್ಧರಿಸಿದ ನಂತರ ಮಾದರ ಮಾತಂಗ ಮನಪರಿವರ್ತನೆಗೊಂಡು ಋಷಿಯಾಗಿ ಸಪ್ತ ಋಷಿಗಳಲ್ಲಿ ಸ್ಥಾನ ಪಡೆದುಕೊಂಡದ್ದು ರೇಣುಕಾಚಾರ್ಯರಿಂದ ಎಂದು ಸ್ಮರಿಸಿದರು. ದಾಸಬಾಳ ಮಠದ ಸದ್ಗುರು ವೀರೇಶ್ವರ ಸ್ವಾಮೀಜಿ ಮಾತನಾಡಿ, ರೇಣುಕಾಚಾರ್ಯರ ಜಯಂತಿ ಕೇವಲ ಜಂಗಮ ಸಮಾಜದವರಷ್ಟೇ ಮಾಡಬೇಕೆಂಬ ಸಂಕುಚಿತತೆ ಬಿಟ್ಟು ಎಲ್ಲರೂ ಆಚರಣೆ ಮಾಡುವಂತಾಗಬೇಕು ಎಂದು ಹೇಳಿದರು.

ವೀರಶೈವ ಸಮಾಜ ನಗರಾಧ್ಯಕ್ಷ ಅಯ್ಯಣ್ಣ ಹುಂಡೇಕಾರ್‌ ಮಾತನಾಡಿ, ಲಿಂ. ಗುರುಸಿದ್ದ ಶಾಸ್ತ್ರಿಗಳು ವೀರಶೈವ ಕಲ್ಯಾಣ ಮಂಟಪ ಕಟ್ಟಲು ಕಾರಣೀಭೂತರಾಗಿದ್ದಾರೆ. ಅಂದಿನ ಸಮಯದಲ್ಲೇ ವೀರಶೈವ ಸಮಾಜ ಕಟ್ಟಿದ  ಧೀಮಂತರಲ್ಲಿ ಒಬ್ಬರು ಎಂದು ಹೇಳಿದರು. ವೀರಶೈವ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಬಾಡಿಯಾಳ ಪ್ರಾಸ್ತಾವಿಕ ಮಾತನಾಡಿ, ಮಹಾಸಭೆ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಯಂತಿ ಹಮ್ಮಿಕೊಳ್ಳಲಾಗಿದ್ದು, ಬರುವ ದಿನಗಳಲ್ಲಿ ಬಸವೇಶ್ವರರ ಮೂರ್ತಿ ಸ್ಥಾಪನೆ, ವಸತಿ ನಿಲಯಗಳು ಸೇರಿದಂತೆ ಸಮಾಜಮುಖೀ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಮಾಜಿ ಶಾಶಕ ಡಾ| ವೀರಬಸವಂತರೆಡ್ಡಿ ಮುದ್ನಾಳ ಕಾರ್ಯಕ್ರಮ ಉದ್ಘಾಟಿಸಿದರು.

ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸೊಪ್ಪಿಮಠದ ಚನ್ನವೀರ ದೇವರು, ರಾಮಗಿರಿ ಹಿರೇಮಠದ ಬಸವರಾಜ ಶಾಸ್ತ್ರಿ, ಮಾಜಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಮಹೇಶರೆಡ್ಡಿ ಮುದ್ನಾಳ, ಶರಣಪ್ಪಗೌಡ ಮಲ್ಹಾರ, ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್‌, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಆರ್‌. ಮಹಾದೇವಪ್ಪ ಅಬ್ಬೆತುಮಕೂರು, ಜಿಲ್ಲಾ ಯುವ ಅಧ್ಯಕ್ಷ ಅವಿನಾಶ ಜಗನ್ನಾಥ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ| ಸುಭಾಶ್ಚಂದ್ರ ಕೌಲಗಿ ನಿರೂಪಿಸಿದರು. ಮಹೇಶ ಹಿರೇಮಠ ಆಶನಾಳ ಸ್ವಾಗತಿಸಿದರು. ಶರಣು ಆಶನಾಳ ವಂದಿಸಿದರು.

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.