18 ತಾಸು ವಿದ್ಯುತ್ ಪೂರೈಕೆಗೆ ಮನವಿ
Team Udayavani, Jan 14, 2020, 1:09 PM IST
ಯಾದಗಿರಿ: ಭೀಮಾ ನದಿ ಮತ್ತು ಕೃಷ್ಣಾ ನದಿ ತೀರದ ರೈತರ ಪಂಪ್‌ಸೆಟ್‌ಗಳಿಗೆ ದಿನದಲ್ಲಿ 18 ತಾಸು ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಯಾದಗಿರಿ ಜಿಲ್ಲೆ ಅತಿ ಹಿಂದುಳಿದಿದೆ. ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೇ ಬರಗಾಲದಿಂದ ಈ ಭಾಗದ ರೈತರಿಗೆ ತತ್ತರಿಸಿದ್ದಾರೆ. ಈ ವರ್ಷ ನೆರೆ ಪ್ರವಾಹದಿಂದ ಬೆಳೆ ಹಾಳಾಗಿದೆ. ಇದರಿಂದ ರೈತರು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರಸ್ತುತ ಭೀಮಾ ನದಿಯಿಂದ ಮತ್ತು ಕೃಷ್ಣಾ ನದಿಯಿಂದ ಪೈಪ್‌ಲೈನ್ ಮೂಲಕ ನೀರಾವರಿ ಮಾಡಿ ಬೆಳೆ ಬೆಳೆಯುತ್ತಿದ್ದು, ಪಂಪ್‌ಸೆಟ್‌ಗಳಿಗೆ ಕೇವಲ 7 ತಾಸು ವಿದ್ಯುತ್ ನೀಡುತ್ತಿರುವುದರಿಂದ ಭತ್ತದ ಬೆಳೆಗೆ ನೀರು ಕಡಿಮೆಯಾಗಿ ರೈತರು ಪರಿತಪಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.
ಬೇಸಿಗೆಯಲ್ಲಿ ಬೆಳೆ ಬೆಳೆಯಲು ದಿನದಲ್ಲಿ ಕನಿಷ್ಠ 18 ತಾಸು ವಿದ್ಯುತ್ ಪೂರೈಕೆ ಮಾಡಿದ್ದಲ್ಲಿ ಬಡ ರೈತರು, ಕೂಲಿಕಾರ್ಮಿಕರಿಗೆ ಅನುಕೂಲವಾಗುತ್ತದೆ. ಇದರಿಂದ ರೈತರು, ಕೂಲಿಕಾರ್ಮಿಕರು, ಬಡವರು ನಗರಗಳಿಗೆ ಉದ್ಯೋಗ ಅರಿಸಿ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲದೇ ದುಡಿಯುವ ಕೈಗಳಿಗೆ ಕೆಲಸ ಸಿಗುತ್ತದೆ. ರೈತರಿಗೆ, ಕಾರ್ಮಿಕರಿಗೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಕ್ರಮವಹಿಸಲು ಆಗ್ರಹಿಸಿದರು.
ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್ ಬಳಕೆದಾರರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀ ರಡ್ಡಿ ಅನಪೂರ, ಕಾರ್ಯದರ್ಶಿ ವೈಜನಾಥ ಪಾಟೀಲ, ಶಾಂತಪ್ಪಗೌಡ ದೇಸಾಯಿ, ಹಣಮಂತ್ರಾಯಗೌಡ ಮುಷ್ಟರ, ಮಲ್ಲನಗೌಡ ಹೊಸ್ಮನಿ, ಕೌಳ್ಳೂರು, ಮಹಾದೇವಪ್ಪಗೌಡ ಅಬ್ಬೆತುಮಕೂರ, ಬಸವಂತರಾಗೌಡ ನಾಯ್ಕಲ, ಗುರುನಾಥರಡ್ಡಿಗೌಡ ಕದರಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.