ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಮನವಿ
Team Udayavani, Jun 18, 2022, 5:09 PM IST
ಗುರುಮಠಕಲ್: ಸರಕಾರ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಸರಕಾರದ ಸೌಲಭ್ಯಗಳು ಎಲ್ಲರಿಗೂ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯು ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವ ನಾಗೇಶ ಅವರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾವನಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೇಧ ಭಾವ ಮೂಡಿಸುವ ಮೂಲಕ ಕೇವಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಿ ಉಳಿದ ಒಬಿಸಿ, ಸಾಮಾನ್ಯ, ಅಲ್ಪಸಂಖ್ಯಾತರ ಬಡ ಮಕ್ಕಳಲ್ಲಿ ತಾರತಮ್ಯ ಎಸಗುವ ಧೋರಣೆ ಕೈಬಿಡುವಂತೆ ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಹೊನ್ನಪ್ಪ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ಮಹ್ಮದ್‌ರಫಿಕ್, ಎಂ.ಡಿ. ರಫಿಕ್ ಚಿನ್ನಕಾರ, ಶರಣುರಡ್ಡಿ ನಜರಾಪುರ, ಹುಸೇನಪ್ಪ ಪುಲಿ ನಜರಾಪೂರ, ಮಹಿಬೂಬಸಾಬ್ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.