ನೂತನ ಪಠ್ಯ ರದ್ದುಗೊಳಿಸಲು ಆಗ್ರಹ


Team Udayavani, Jun 16, 2022, 3:54 PM IST

17text

ಶಹಾಪುರ: ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಇತಿಹಾಸ ತಿರುಚುವ ಕೆಲಸ ಮಾಡಿದ್ದು, ಡಾ| ಅಂಬೇಡ್ಕರ್‌ ಅವರ ಕುರಿತು ಗೌರವ ಪೂರ್ಣವಾದ ಸಂವಿಧಾನ ಶಿಲ್ಪಿ ಪದವನ್ನು ಸಹ ತೆಗೆದು ಹಾಕಿರುವುದು ನೋಡಿದರೆ, ಪ್ರಸ್ತುತ ಸರ್ಕಾರದ ರಾಜಕೀಯ ಮನಸ್ಥಿತಿ ಅರ್ಥ ಆಗಲಿದೆ. ಕೂಡಲೇ ನೂತನ ಪಠ್ಯ ಮಕ್ಕಳಿಗೆ ಶಿಕ್ಷಣ ಕೊಡಬೇಡಿ. ಈ ಮೊದಲಿನ ಹಳೇ ಪುಸ್ತಕ ಪ್ರಕಾರವೇ ಮಕ್ಕಳು ಶಿಕ್ಷಣ ಪಡೆಯಲಿ ಎಂದು ಡಿಎಸ್‌ಎಸ್‌ ಮುಖಂಡ ಶಿವಪುತ್ರ ಜವಳಿ ಆಗ್ರಹಿಸಿದರು.

ತಹಶೀಲ್ದಾರ್‌ ಕಚೇರಿ ಮುಂದೆ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ನಡೆದ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪಠ್ಯ ಪುಸ್ತಕ ಮರು ಪರಿಷ್ಕರಣೆ ಸಮಿತಿಯಲ್ಲಿ ಹೆಚ್ಚಿನವರು ಬ್ರಾಹ್ಮಣರಿದ್ದು, ಇವರೆಲ್ಲ ಹಿಂದುಳಿದ, ದಲಿತ ಸಮುದಾಯದ ಮಹಾನ್‌ ವ್ಯಕ್ತಿಗಳ ಮಹಾತ್ಮರ ಚರಿತ್ರೆಯನ್ನು ತಿರುಚುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಚಕ್ರತೀರ್ಥ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಆತನ ವಿಕೃತ ನಡವಳಿಕೆ ಕುರಿತು ಸಾಕಷ್ಟು ವಿಚಾರಗಳು ಬಯಲಾಗಿವೆ. ಆತನ ಮನಸ್ಥಿತಿ ಏನೆಂಬುದು ಗೊತ್ತಾಗಿದೆ. ಇಂತಹ ಕೀಳು ಮಟ್ಟದ ವ್ಯಕ್ತಿತ್ವ ಹೊಂದಿದ ಚಕ್ರತೀರ್ಥನನ್ನು ಪಠ್ಯ ಪುಸ್ತಕ ಪರಿಷ್ಕರಣೆ ನೇತೃತ್ವ ನೀಡಿರುವುದು ಆಘಾತಕಾರಿ ವಿಷಯವಾಗಿದೆ. ಈ ಕೂಡಲೇ ಸರ್ಕಾರ ಸಮರ್ಪಕ ಪರಿಶೀಲನೆ ನಡೆಸುವ ಮೂಲಕ ಹೊಸ ಪಠ್ಯ ಪರಿಷ್ಕರಣೆ ಕೈಬಿಟ್ಟು ಹಳೇ ಪುಸ್ತಕವೇ ಮಕ್ಕಳ ಶಿಕ್ಷಣಕ್ಕೆ ಸೌಲಭ್ಯ ಕಲ್ಪಿಸಬೇಕೆಂದು ಅವರು ಒತ್ತಾಯಿಸಿದರು.

ಅಲ್ಲದೇ ಶಿಕ್ಷಣ ಸಚಿವ ಬಿ. ನಾಗೇಶ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ಅವರು ಆಗ್ರಹಿಸಿದರು. ಪಠ್ಯ ಪರಿಷ್ಕರಣೆಯಲ್ಲಿ ಇಲ್ಲ ಸಲ್ಲದ ವಿಷಯಗಳನ್ನು ಬಿತ್ತರಿಸುವ ಮೂಲಕ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಈ ಕೂಡಲೇ ನೂತನ ಪಠ್ಯವನ್ನು ರದ್ದುಗೊಳಿಸಿ ಈ ಮೊದಲಿನ ಪಠ್ಯವನ್ನೇ ಮಕ್ಕಳ ಓದಿಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ಒಕ್ಕೂಟದ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಹುರಸಗುಂಡಗಿ, ಮುಖಂಡರಾದ ಶಿವಕುಮಾರ ತಳವಾರ, ಮರೆಪ್ಪ ಕ್ರಾಂತಿ, ಬಾಲರಾಜ ಖಾನಾಪುರ, ಮಲ್ಲಪ್ಪ ಪೂಜಾರಿ, ಲಕ್ಷ್ಮಣ ರಸ್ತಾಪುರ, ವಾಸು ಕೋಗಿಲಕರ್‌, ಸಂದೀಪ ಹುರಸಗುಂಡಗಿ, ಭೀಮಾಶಂಕರ ಗುಂಡಳ್ಳಿ, ಶರಬಣ್ಣ ದೋರನಹಳ್ಳಿ, ಸಂತೋಷ ಗುಂಡಳ್ಳಿ ಇತರರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.