ಮೂಲ ಸೌಕರ್ಯ ಕಲ್ಪಿಸಲು ಮನವಿ
Team Udayavani, Sep 9, 2017, 5:33 PM IST
ಶಹಾಪುರ: ನಗರದ ಸರಕಾರಿ ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಹಾಗೂ ನಿಗದಿತ ಸಮಯದಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸಲಿ ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ತಾಲೂಕು ಘಟಕದಿಂದ ಶುಕ್ರವಾರ ಸರಕಾರಿ ಆಸ್ಪತ್ರೆ ಎದುರು ಧರಣಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಮಲ್ಲಯ್ಯ ಪೋಲಂಪಲ್ಲಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವ ವೈದ್ಯರು ಸಿಗುವುದಿಲ್ಲ. ಅಲ್ಲದೆ ಕುಡಿಯಲು ನೀರು ಸಹ ಸಿಗದೆ ಬರುವ ರೋಗಿಗಳು ಪರದಾಡುವಂತಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲದೆ ನೂರಾರು ಜನರು ನಿತ್ಯ ನರಕಯಾತನೆ
ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿದ್ದು ಸಹ ಕರ್ತವ್ಯ ನಿಭಾಯಿಸುವುದಿಲ್ಲ. ಮಾಸಿಕ ಲಕ್ಷಗಟ್ಟಲೇ ಪಗಾರ ಮಾತ್ರಬೇಕು. ಆದರೆ ಕರ್ತವ್ಯ ಬೇಕಾಗಿಲ್ಲ. ಅಲ್ಲದೆ ಇಲ್ಲಿನ ವೈದ್ಯರು ವಾರಕ್ಕೊಬ್ಬರಂತೆ ಕರ್ತವ್ಯ ನಿಭಾಯಿಸುವ ವಾಗ್ಧಾನ ಮಾಡಿಕೊಂಡಿದ್ದಾರೆ. ಅದು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂದು ಆರೋಪಿಸಿದರು.
ಎಸ್.ಎಂ. ಸಾಗರ ಮಾತನಾಡಿ, ಆಸ್ಪತ್ರೆಗೆ ದಾಖಲಾಗುವ ಒಳರೋಗಿಗಳಿಂದಲೂ ಹಣ ವಸೂಲಿ ನಡೆಯುತ್ತಿದೆ.
ಇದರಿಂದ ಬಡರೋಗಿಗಳು ಈ ಆಸ್ಪತ್ರೆ ಅವ್ಯವಸ್ಥೆಗೆ ಹಿಡಿ ಶಾಪ ಹಾಕುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಿ ಸಾಮಾನ್ಯ ಜನರಿಗೆ ಉತ್ತಮ ಸೇವೆ ಒದಗಿಸುವಂತೆ ಮಾಡಬೇಕು. ಇಲ್ಲವಾದಲ್ಲಿ
ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ ವೆಂಕಣಗೌಡ ಅವರಿಗೆ ಪ್ರತಿಭಟನಾ ನಿರತರಿಂದ ಮನವಿ ಪತ್ರ ಸಲ್ಲಿಸಲಾಯಿತು. ಮುಂಚಿತವಾಗಿ ಸಿ.ಬಿ.ಕಮಾನದಿಂದ ಆಸ್ಪತ್ರೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಜೈಲಾಲ್ ತೋಟದಮನಿ, ದಾವಲಸಾಬ, ನಿಂಗಣ್ಣ ತಿಪ್ಪನಹಳ್ಳಿ,
ಹೊನ್ನಪ್ಪ ಮಾನ್ಪಡೆ, ಸಿದ್ದಯ್ಯ ಹಿರೇಮಠ, ಬಸವರಾಜ ಭಜಂತ್ರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.