ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಸೂಚನೆ
ಕೋವಿಡ್ ಹಿನ್ನೆಲೆ ಕೇವಲ 12 ವಿದ್ಯಾರ್ಥಿಗಳಿಗೆ ಒಂದು ಕೋಣೆ ವ್ಯವಸ್ಥೆ ಮಾಡಿ ಅಂತರ ಕಾಪಾಡಿಕೊಳ್ಳಬೇಕು
Team Udayavani, Jul 1, 2021, 7:16 PM IST
ಯಾದಗಿರಿ: ಜಿಲ್ಲೆಯಾದ್ಯಂತ ಜು. 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹೊರಡಿಸಲಾದ ನಿರ್ದೇಶನದಂತೆ ಪರೀಕ್ಷೆ ನಡೆಸಲು ಅಣಿಯಾಗುವಂತೆ ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 231 ಪ್ರೌಢಶಾಲೆಗಳಿವೆ. ಸರ್ಕಾರಿ ಪ್ರೌಢಶಾಲೆ, ಅನುದಾನಿತ ಪ್ರೌಢಶಾಲೆ, ಸರ್ಕಾರಿ/ ಖಾಸಗಿ ವಸತಿ ಪ್ರೌಢಶಾಲೆಯ ಒಟ್ಟು 17,749 ಮಕ್ಕಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಪಾಟೀಲ್
ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು 92 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಪ್ರತಿ ಕೇಂದ್ರಕ್ಕೆ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ. 1,480 ಪರೀûಾ ಕೋಣೆಗಳನ್ನು ಸಿದ್ಧತೆ ಮಾಡಿಕೊಂಡಿದ್ದು, ಕೋವಿಡ್ ಹಿನ್ನೆಲೆ ಕೇವಲ 12 ವಿದ್ಯಾರ್ಥಿಗಳಿಗೆ ಒಂದು ಕೋಣೆ ವ್ಯವಸ್ಥೆ ಮಾಡಿ
ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ಮೂರು ತಾಲೂಕಿನಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರಗಳನ್ನು ಗುರುತಿಸಿ ಆಯಾ ತಾಲೂಕು ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೌಂಟರ್ ಪರೀಕ್ಷಾ ಕೇಂದ್ರದ ಮುಖ್ಯ
ದ್ವಾರದಲ್ಲಿ ಸ್ಥಾಪಿಸಲು ಸೂಚಿಸಿದರು.
ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಪರೀಕ್ಷಾ ಮಕ್ಕಳಿಗಾಗಿ ಮೀಸಲಿಡಬೇಕು. ಪರೀಕ್ಷಾ ಸಮಯದಲ್ಲಿ ಕೇಂದ್ರಗಳಿಗೆ ಥರ್ಮಲ್ ಸ್ಕಾನರ್‌ಗಳನ್ನು ಬಳಸಬೇಕು. ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸರ್ ಮಾಡಿ ಸ್ವಚ್ಛಗೊಳಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾ ಧಿಕಾರಿ ಶಂಕರಗೌಡ ಸೋಮನಾಳ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕಿನ ಪರೀಕ್ಷಾ ನೊಡಲ್ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.