ಶಿಕ್ಷಕ ಸಮೂಹ ಗೌರವಿಸಿ: ಗದ್ದುಗೆ
Team Udayavani, Mar 3, 2018, 5:19 PM IST
ನಾರಾಯಣಪುರ: ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುವ ಶಿಕ್ಷಕ ಸಮೂಹವನ್ನು ಸಮಾಜ ಪೂಜ್ಯನೀಯ ಭಾವದಿಂದ ಕಾಣುತ್ತೆ ಎಂದು ಕರವೇ ಉ.ಕ ಅಧ್ಯಕ್ಷ ಶರಣು ಗದ್ದುಗೆ ಹೇಳಿದರು.
ಪಟ್ಟಣದ ಶ್ರೀಗುರು ದುರದುಂಡೇಶ್ವರ ವಿದ್ಯಾವರ್ಧಕ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯ 12ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಮಕ್ಕಳ ಪ್ರಗತಿಗೆ ಪಾಲಕರು ಕೂಡ ಗಮನ ಹರಿಸಿ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಬೇಕು. ಆಗ ಮಾತ್ರ ಶೈಕ್ಷಣಿಕವಾಗಿ ಯಶಸ್ಸು ಹೊಂದಲು ಸಾಧ್ಯ ಎಂದರು. ಜಿಪಂ ಮಾಜಿ ಸದಸ್ಯ ಎಚ್.ಸಿ. ಪಾಟೀಲ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.
ಶಹಾಪುರ ಫಕೀರೇಶ್ವರ ಮಠದ ನಿರುಪಾದೇಶ್ವರ ಶ್ರೀ, ಶ್ರೀಗುರು ದುರದುಂಡೇಶ್ವರ ವಿರಕ್ತಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚಿಸಿದರು. ಬಸವ ಪೀಠದ ಉತ್ತರಾಧಿಕಾರಿ ವೃಷಬೇಂದ್ರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜಾ ಜೀತೇಂದ್ರನಾಯಕ ಜಹಾಗೀರದಾರ, ತಾಪಂ ಸದಸ್ಯ ಮೋಹನ ಪಾಟೀಲ್, ಡಾ| ಬಿ.ಬಿ. ಬಿರಾದಾರ, ಗ್ರಾಪಂ ಅಧ್ಯಕ್ಷ ಮಹಿಮಪ್ಪ ಸೊನ್ನಾಪುರ, ಶಾಮಸುಂದರ ಜ್ಯೋಷಿ, ವಿ.ಎಸ್. ಹಾವೇರಿ, ಕನಕು ಜೀರಾಳ, ಸುರೇಶ ದೇವೂರ, ಅಯ್ಯಪ್ಪ ಪಿಡಶೆಟ್ಟಿ, ಅಂಬಣ್ಣ ದೊರಿ, ಬಿ.ಬಿ. ಅಂಗಡಿ, ಭೀಮನಗೌಡ ತೀರ್ಥ, ಬಿ.ಎಂ. ಅಂಗಡಿ ವೇದಿಕೆ ಮೇಲಿದ್ದರು. ಸೈಲಾ ಶೆಟ್ಟರ ಪ್ರಾರ್ಥಿಸಿದರು.
ಶಾಮಸುಂದರ ಜ್ಯೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಮೆದಕಿನಾಳ ವಾರ್ಷಿಕ ವರದಿ ವಾಚನ ಮಾಡಿದರು. ಪುಷ್ಪಾ ಆಲಕ್ಕಿ ಸ್ವಾಗತಿಸಿದರು. ಬಸವರಾಜ ಭದ್ರಗೋಳ ನಿರೂಪಿಸಿದರು. ಭೀಮನಗೌಡ ಬಿರಾದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.