ದೇವಪುರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ
Team Udayavani, Feb 5, 2022, 5:09 PM IST
ಸುರಪುರ: ಗಣರಾಜ್ಯೋತ್ಸವದಂದು ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಡಾ| ಡಿ.ಜಿ. ಸಾಗರ ಬಣ) ಶುಕ್ರವಾರ ದೇವಪುರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಬಳಿಕ ಸಮಿತಿ ಮುಖಂಡರು ಮಾತನಾಡಿ, ರಾಯಚೂರು ಜಿಲ್ಲಾ ನ್ಯಾಯಾಧೀಶರು ಸಂವಿಧಾನ ಶಿಲ್ಪಿ ಮತ್ತು ನ್ಯಾಯಪೀಠಕ್ಕೆ ಅವಮಾನ ಮಾಡಿದ್ದಾರೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ದ್ರೋಹವೆಸಗಿದಂತಾಗಿದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಜಿಲ್ಲಾ ನ್ಯಾಯಾಧೀಶರ ಮೇಲೆ ರಾಷ್ಟ್ರ ದ್ರೋಹ, ಎಸ್ಸಿ-ಎಸ್ಟಿ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೇವೆಯಿಂದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ನಂತರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪರ, ತಾಲೂಕು ಸಂಚಾಲಕ ವೀರಭದ್ರಪ್ಪ ದೊಡ್ಡಮನಿ, ತಿಪ್ಪಣ್ಣ ಶೆಳ್ಳಗಿ, ಚನ್ನಬಸಪ್ಪ ತಳವಾರ, ಬಸವರಾಜ ಜಾನಕರ, ಎಂ.ಪಟೇಲ್, ಶೇಖರ ಮಂಗಳೂರು, ಖಾಜಾ ಅಜ್ಮಿàರ್, ಮರಲಿಂಗ ಗುಡಿಮನಿ, ಬಾಲರಾಜ, ಮಾನಪ್ಪ ಶೆಳ್ಳಗಿ, ವೆಂಕಟೇಶ ದೇವಪುರ, ಹಸನಪ್ಪ ದೇವಪುರ, ಮೌನೇಶ ತಳವಾರ, ದೇವಪ್ಪ, ಭೀಮಾಶಂಕರ, ಭೀಮಣ್ಣ, ಅಯ್ಯಪ್ಪ, ಪರಶುರಾಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.