ಸೈದಾಪುರ: ದುರಸ್ತಿ ಕಾಣದ ಶಿಥಿಲಗೊಂಡ ಶಾಲಾ ಕಟ್ಟಡ ; ಸೋರುತಿಹುದು ಶಾಲೆ ಮಾಳಿಗಿ


Team Udayavani, Jul 16, 2022, 5:39 PM IST

tdy-25

ಸೈದಾಪುರ: ಜೋರು ಮಳೆ ಬಂದರೆ ಸೋರುವ ಸೂರು, ಶಿಥಿಲಗೊಂಡಿರುವ ಕೊಠಡಿಯಲ್ಲಿ ಮಳೆ ನೀರು, ಮಳೆ ನಿಲ್ಲುವವರೆಗೆ ಮಕ್ಕಳು ಕೈಯಲ್ಲಿ ಪುಸ್ತಕದ ಚೀಲಗಳನ್ನು ಹಿಡಿದುಕೊಂಡು ಮಕ್ಕಳು ಜೀವ ಭಯದಲ್ಲಿ ಪಾಠ ಕೇಳುವಂತಾಗಿದೆ.

ಪಟ್ಟಣದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ  15 ಕೋಣೆಗಳು ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದಿನ ನಿತ್ಯ ಭೀತಿ ಎದುರಿಸುವಂತಾಗಿದೆ. 1959ರಲ್ಲಿ ಸುಮಾರು 11826 ಚದರ ಅಡಿ ವಿಸ್ತಾರದಲ್ಲಿ 15 ಕೋಣೆಗಳ ಶಾಲಾ ಕಟ್ಟಡ ನಿರ್ಮಾಣಗೊಂಡಿದೆ. ಈ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 220 ವಿದ್ಯಾರ್ಥಿಗಳಿದ್ದಾರೆ. ಶಾಲಾ ಕಟ್ಟಡವು ಸುಮಾರು 60 ವರ್ಷಗಳ ಹಳೆಯದಾದ ಕಾರಣ ಕಟ್ಟಡದ ಮೇಲ್ಛಾವಣಿ ಶಿಥಿಲಗೊಂಡಿದ್ದು ಸ್ವಲ್ಪ ಮಳೆ ಬಂದರು ಕೂಡ ತರಗತಿ ಕೋಣೆಗಳು ಸೋರುತ್ತವೆ. ಗೋಡೆಗಳ ಮತ್ತು ಚಾವಣಿಯ ಸಿಮೆಂಟ್ ಪದರು ಕೆಲವೊಮ್ಮೆ ಶಾಲಾವಧಿಯಲ್ಲಿಯೇ ಉದುರಿ ಬೀಳುತ್ತಿದೆ. ಅಲ್ಲದೇ ಕಬ್ಬಿಣದ ಕಂಬಿಗಳು ಹೊರಗಡೆ ಕಾಣುತ್ತಿವೆ. 15 ಕೋಣೆಗಳಲ್ಲಿ 4 ಕೋಣೆಗಳು ಸ್ವಲ್ಪ ಉತ್ತಮವಾಗಿವೆ. ಉಳಿದ 08 ಕೋಣೆಗಳು ಶಿಥಿಲಗೊಂಡಿವೆ. ಅದರಲ್ಲಿ 3 ಕೋಣೆಗಳು ಸಂಪೂರ್ಣ ಶಿಥಿಲಗೊಂಡು ತರಗತಿ ನಡೆಸಲು ಯೋಗ್ಯವಾಗಿರದೆ ಇರುವುದರಿಂದ ಅವುಗಳನ್ನು ಮುಚ್ಚಲಾಗಿದೆ.

ಮಳೆಗಾಲದಲ್ಲಿ ಸ್ವಲ್ಪ ಮಳೆ ಬಂದರೆ ಸಾಕು ತರಗತಿಯಲ್ಲಿ ನೀರು ಸೋರುತ್ತದೆ. ಮಳೆ ನಿಲ್ಲುವವರೆಗೆ ಅಲ್ಪ-ಸ್ವಲ್ಪ ಸೋರದೆ ಇರುವ ಕೋಣೆಯ ಯಾವುದಾದರೊಂದು ಮೂಲೆಯಲ್ಲಿ ಮಕ್ಕಳು ಪುಸ್ತಕ, ಚೀಲಗಳನ್ನು ಹಿಡಿದು ನಿಲ್ಲುಬೇಕಾಗಿದೆ.  ಒಂದು ಕಾಲದಲ್ಲಿ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇಂದು ಅದೇ ಶಾಲೆಯ ಪರಿಸ್ಥಿತಿ ಗಮನಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಜಾಣ ಕುರುಡುತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪ್ರತಿ ವರ್ಷವು ಕೂಡ ಶಾಲೆಯ ಮುಖ್ಯ ಗುರುಗಳು ಶಾಲಾವಸ್ಥೆಯನ್ನು ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಮನವಿಯನ್ನು ನೀಡಿದರು ಪ್ರಯೋಜನವಾಗಿಲ್ಲ.

ದೈಹಿಕ ಶಿಕ್ಷಕರಿದ್ದರೂ ಆಟದ ಮೈದಾನವಿಲ್ಲ: ಈ ಶಾಲೆಯಲ್ಲಿ ದೈಹಿಕ ಶಿಕ್ಷಕರಿದ್ದರೂ ಮಕ್ಕಳಿಗೆ ಆಟವಾಡಲು ಆಟದ ಮೈದಾನವಿಲ್ಲ. ಇದೇ ಶಾಲೆಯಲ್ಲಿ ಹಿಂದೆ ಅಕ್ಕ-ಪಕ್ಕದ ಖಾಲಿ ಜಾಗದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದ್ದರು.

ಈ ಶಾಲೆಯ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತೆವೆ ಹಾಗೂ ಗ್ರಾಮದ ಮುಖಂಡರು ಸಹಕಾರ ನೀಡಿದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಪ್ರಯತ್ನಿಸುತ್ತೇವೆ. -ಸ್ನೇಹಲ್ ಆರ್, ಜಿಲ್ಲಾಧಿಕಾರಿ ಯಾದಗಿರಿ

ಈ ಭಾಗದಲ್ಲಿ ಮಾದರಿ ಶಾಲೆ ಎಂಬ ಖ್ಯಾತಿ ಪಡೆದುಕೊಂಡು ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಿದಂತಹ ಶಾಲೆ ಇಂದು ಶಿಥಿಲಾವಸ್ಥೆ ತಲುಪಿರುವುದು ರ್ದುದೈವದ ಸಂಗತಿಯಾಗಿದೆ. ದಯವಿಟ್ಟು ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು,  ಮತ್ತು ಗ್ರಾಮದ ಮುಖಂಡರು ನೂತನ ಕಟ್ಟಡವನ್ನು ನಿರ್ಮಿಸಲು ಸಹಾಯ ಸಹಕಾರ ನೀಡಬೇಕು.-ಬಸವರಾಜ ನಾಯಕ ಸೈದಾಪುರ ಎಸ್‍ಡಿಎಂಸಿ ಅಧ್ಯಕ್ಷ

-ಭೀಮಣ್ಣ ಬ ವಡವಟ್

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.