ಶಾಲೆ ಸುತ್ತಿದ ಚರಂಡಿ ನೀರು
Team Udayavani, Sep 2, 2017, 5:30 PM IST
ಯಾದಗಿರಿ: ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸುತ್ತ ಚರಂಡಿಗಳ ನೀರು ಸಂಗ್ರಹಗೊಂಡು ಇಡೀ ಶಾಲಾ ವಾತಾವರಣ ಹಾಳಾಗಿದೆ. ಶಾಲೆ ಸುತ್ತ ಸಂಗ್ರಹಗೊಂಡ ಕೊಳಚೆ ನೀರಿನಿಂದ ಶಾಲಾ ಮಕ್ಕಳಿಗೆ ಡೆಂಘೀ, ಚಿಕೂನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ
ಎದುರಾಗಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೊಳಚೆ ನೀರು ಸ್ವತ್ಛಗೊಳಿಸಿ ಮಕ್ಕಳು
ಶಾಲೆಗೆ ತೆರೆಳಲು ಅನುಕೂಲ ಮಾಡಿಕೊಡಬೇಕೆಂದು ಎಂದು ಪಾಲಕರು ಆಗ್ರಹಿಸಿದ್ದಾರೆ. ಶಾಲೆ ಸುತ್ತ ಕೊಳಚೆ ನೀರು ಸಂಗ್ರಹದಿಂದ ಸೊಳ್ಳೆಗಳು ಹೆಚ್ಚಾಗಿವೆ. ಇನ್ನೂ ಸೊಳ್ಳೆ ಕಡಿತದಿಂದ ರೋಗಗಳು ಆವರಿಸುವ ಹಿನ್ನೆಲೆಯಲ್ಲಿ ಮಕ್ಕಳು ಭಯ ಭೀತರಾಗಿದ್ದಾರೆ. ಪ್ರತಿನಿತ್ಯ ಮೂಗು ಮುಚ್ಚಿಕೊಂಡು ಪಾಠ ಕೇಳುವಂತಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ಶಾಲೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ಆಯ ತಪ್ಪಿದರೆ ಚರಂಡಿಯಲ್ಲಿ
ಬೀಳುವುದು ಗ್ಯಾರಂಟಿ. ಶಾಲೆಯ ಸುತ್ತ ಮುತ್ತ ಚರಂಡಿ ನೀರು ನಿಲ್ಲದಂತೆ ಕ್ರಮ ಕೈಗೊಳಬೇಕು ಎಂದು ಗ್ರಾಪಂಗೆ ಅನೇಕ ಬಾರಿ ನಿವಾಸಿಗಳು ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಕ್ಕಳ ಪೋಷಕರು
ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.