ಕೊತ್ತಲ ಬಸವೇಶ್ವರ ದೇಗುಲ ಸೀಲ್‌ಡೌನ್
Team Udayavani, Apr 20, 2020, 1:37 PM IST
ಸೇಡಂ: ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಪ್ರದೇಶವನ್ನು ಸೀಲ್‌ಡೌನ್ ಮಾಡಿದ್ದು, ಸಹಾಯಕ ಆಯುಕ್ತ ರಮೇಶ ಕೋಲಾರ ಪರಿಶೀಲಿಸಿದರು.
ಸೇಡಂ: ಪಟ್ಟಣದ ಸುಪ್ರಸಿದ್ಧ ಐತಿಹಾಸಿಕ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ರವಿವಾರ ದೇವಾಲಯವನ್ನು ಸೀಲ್‌ಡೌನ್ ಮಾಡಲಾಗಿದ್ದು, ಸ್ವಾಮೀಜಿ ಮೇಲೂ ನಿಗಾ ವಹಿಸಲಾಗಿದೆ.
ಇತ್ತೀಚೆಗೆ ವಾಡಿ ಸಮೀಪದ ರಾವೂರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆಗಳು ನಡೆದ ಪರಿಣಾಮ ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ. ರವಿವಾರ ಕೊತ್ತಲ ಬಸವೇಶ್ವರ ಜಾತ್ರೆ ಇದ್ದ ನಿಮಿತ್ತ, ದೇವಾಲಯ ಸಮಿತಿ ಜಾತ್ರೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ ಮುಂಜಾಗ್ರತಾ ಕ್ರಮವಾಗಿ ದೇವಾಲಯಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ದೇವಾಲಯದ ಪ್ರಮುಖ ದ್ವಾರಗಳಿಗೆ ಕಟ್ಟಿಗೆಗಳ ಬೇಲಿ ನಿರ್ಮಿಸಿದ್ದಲ್ಲದೆ, ಪರದೆ ಹಾಕಿ ದೇವಾಲಯವನ್ನು ಭಕ್ತರಿಗೆ ಕಾಣದಂತೆ ಮರೆಮಾಚಲಾಗಿದೆ. ಪ್ರತಿ ವರ್ಷ ಜಾತ್ರೆ ದಿನ ಸಾವಿರಾರು ಜನರಿಂದ ಕಂಗೊಳಿಸುತ್ತಿದ್ದ ರಥ ಬೀದಿ ರವಿವಾರ ಬಿಕೋ ಎನ್ನುತ್ತಿತ್ತು. ಎಲ್ಲೆ ನೋಡಿದರಲ್ಲಿ ಪೊಲೀಸರ ಬೂಟು, ಲಾಠಿ ಸಪ್ಪಳ ಕೇಳಿಬರುತ್ತಿತ್ತು. ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ಸಿಪಿಐ ರಾಜಶೇಖರ ಹಳಗೋದಿ, ಪಿಎಸ್‌ಐ ಸುಶೀಲಕುಮಾರ, ವಿದ್ಯಾಶ್ರೀ ದೇವಾಲಯಕ್ಕೆ ಪದೇ ಪದೇ ಭೇಟಿ ನೀಡಿ ಆಗುಹೋಗುಗಳ ಮೇಲೆ ನಿಗಾ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.