Shahapur: ಅಗ್ನಿ ಅವಘಡ 4 ಅಂಗಡಿಗಳು ಭಸ್ಮ ; ಅಪಾರ ನಷ್ಟ
Team Udayavani, Oct 5, 2023, 12:10 AM IST
ಶಹಾಪುರ: ನಗರ ಗ್ಯಾರೇಜ್ ಲೈನ್ ನ ಫ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಶಹಾಪುರ ನಗರದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ನಾಗರಿಕರ ಕರೆ ಮೇರೆಗೆ ಬೆಂಕಿ ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿಗಳು ದೌಡಾಯಿಸಿ ಅಗ್ನಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ನಾಲ್ಕು ಅಂಗಡಿಯ ಅಪಾರ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿವೆ.
ಫ್ಲೈವುಡ್ ವರ್ಕರ್ ಅಂಗಡಿ, ಪೂರ್ಣಿಮಾ ಹೊಟೇಲ್ ಸೇರಿದಂತೆ ಬೈಕ್ ದುರಸ್ತಿ ಗ್ಯಾರೇಜ್ ಮತ್ತು ರೇಡಿಯಂ ವರ್ಕ್ಸ್ ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು ಅಪಾರ ಹಾನಿಯಾಗಿದೆ.
ಗ್ಯಾರೇಜ್ ನಲ್ಲಿ ಒಂದು ಬುಲೆಟ್ ಹಾಗೂ ನಾಲ್ಕು ಇತರೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಅದೇ ರೀತಿ ಇತರೆ ಅಂಗಡಿಗಳಲ್ಲಿರುವ ಸಾಮಾಗ್ರಿಗಳು ಸುಟ್ಟು ಅಪಾರ ನಷ್ಟವಾಗಿರುವ ಕುರಿತು ಅಂಗಡಿ ಮಾಲಕರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಸಿಬಂದಿಗಳು ಆಗಮಿಸಿ ಅಗ್ನಿ ಶಾಮಕ ದಳದವರಿಗೆ ಅನುವು ಮಾಡಿಕೊಟ್ಟರು. ಬೆಂಕಿ ಧಗಧಗಿಸುವದನ್ನು ನೋಡಿ ನಗರದ ಜನತೆ ಗಾಬರಿಯೊಳಗಾಗಿದ್ದರು. ಅದೃಷ್ಟವಶಾತ್ ತಾವುದೇ ಪ್ರಾಣಪಾಯವಾಗಿರುವದಿಲ್ಲ. ಕಳೆದ ವರ್ಷವು ಇವೇ ಅಂಗಡಿಗಳಿಗೆ ಬೆಂಕಿ ತಾಗಿರುವದನ್ನು ಸ್ಮರಣಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.