![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 26, 2020, 6:33 AM IST
ಶಹಾಪುರ: ದಿನೇದಿನೆ ನೊವೆಲ್ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ನಿಗದಿತ ಆಸ್ಪತ್ರೆ ಸ್ಥಾಪಿಸುವ ಸಲುವಾಗಿ ಸೋಮವಾರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ನಗರಕ್ಕೆ ಭೇಟಿ ನೀಡಿ ವಿವಿಧ ಸ್ಥಳಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂದು ತಹಶೀಲ್ದಾರ್ ಜಗನ್ನಾಥರಡ್ಡಿ ತಿಳಿಸಿದ್ದಾರೆ.
ನಗರದ ಬಾಪುಗೌಡ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ಮಿಸಿರುವ 20 ಕೋಣೆಗಳುಳ್ಳ ಪರಿಶಿಷ್ಟ ಜಾತಿ ವಸತಿನಿಲಯ ಸೇರಿದಂತೆ ತಾಲೂಕಿನ ಹೋತಪೇಟ ನವೋದಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಮೂಲಸೌಲಭ್ಯ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅಲ್ಲದೆ ಪರಿಶಿಷ್ಟ ಜಾತಿ ವಸತಿ ನಿಲಯದ ನೂತನ ಕಟ್ಟಡಗಳ ಪ್ರತಿ ಕೋಣೆಯಲ್ಲಿ ಎರಡು ಬೆಡ್ ಕಾಟ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ನಂತರ ಕನ್ಯಾಕೋಳೂರ ರಸ್ತೆಯಲ್ಲಿರುವ ಬಿಸಿಎಂ ವಸತಿ ನಿಲಯಕ್ಕೆ ಭೇಟಿ ನೀಡಿ ಕ್ವಾರಂಟೈನ್ ಕೇಂದ್ರದಲ್ಲಿ ಸಮರ್ಪಕ ಸೌಲಭ್ಯ ಕಲ್ಪಿಸುವಂತೆ, ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ ಜಗನ್ನಾಥರಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ| ರಮೇಶ ಗುತ್ತೇದಾರ, ಪೌರಾಯುಕ್ತ ಬಸವರಾಜ ಶಿವಪೂಜೆ ಇದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.