ಕೋವಿಡ್ ತಡೆಗೆ ಮುಂಜಾಗ್ರತೆ ವಹಿಸಿ: ಒಡೆಯರ್ ಸಲಹೆ
Team Udayavani, Jun 24, 2020, 12:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಪುರ: ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೋವಿಡ್ ವೈರಸ್ ಅಪಾಯಕಾರಿಯಾಗಿದೆ. ಇದರ ತಡೆಗೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಗೋಗಿ ಪೊಲೀಸ್ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ತಾಲೂಕಿನ ಗೋಗಿ ಗ್ರಾಮದಲ್ಲಿ ಹಮ್ಮಿಕೊಂಡ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಮತ್ತು ಮಾಸ್ಕ್ ವಿತರಣೆ ಮತ್ತು ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರು ಮನೆಯಿಂದ ಹೊರಗಡೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಮತ್ತು ಯಾವುದಾದರೂ ವಸ್ತುಗಳನ್ನು ಮುಟ್ಟಿದರೆ ಸ್ಯಾನಿಟೈಸರ್‌ನಿಂದ ಕೈ ತೊಳೆದುಕೊಳ್ಳಬೇಕು. ಮನೆಗೆ ತೆಗೆದುಕೊಂಡು ಬಂದ ವಸ್ತುಗಳನ್ನು ತೊಳೆಯಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಚನ್ನಾರಡ್ಡಿ ಎಂ. ತಂಗಡಗಿ ಮಾತನಾಡಿದರು. ಎನ್ನೆಸ್ಸೆಸ್ ಘಟಕ ಅಧಿಕಾರಿ ಡಾ| ರಾಜು ಶಾಮರಾವ್ ಪ್ರಾಸ್ತಾವಿಕ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.