ಸಮರ್ಪಕ ಕರ್ತವ್ಯ ನಿರ್ವಹಣೆಗೆ ಸೂಚನೆ
ನಿಗದಿತ ಸಮಯದಲ್ಲಿ ಅರ್ಜಿ ವಿಲೇವಾರಿ ಮಾಡಿದೂರುಗಳಿಗೆ ಬೇಕಾ ಬಿಟ್ಟಿ ಉತ್ತರ ನೀಡಿದರೆ ಕ್ರಮ
Team Udayavani, Feb 19, 2020, 2:35 PM IST
ಶಹಾಪುರ: ಸಾರ್ವಜನಿಕರ ಕೆಲಸ ಸಮರ್ಪಕವಾಗಿ ಮಾಡಿಕೊಡುವುದು ಅಧಿಕಾರಿ ಮತ್ತು ಅಲ್ಲಿನ ಸಿಬ್ಬಂದಿಗಳ ಕರ್ತವ್ಯ. ಅದು ಬಿಟ್ಟು ಅವರನ್ನು ಅಲೆದಾಡಿಸುವುದು, ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ. ಈ ಬಗ್ಗೆ ಸಾಕಷ್ಟು ದೂರು ಬಂದಿದ್ದು, ಮುಂಬರುವ ದಿನಗಳಲ್ಲಿ ಅ ಧಿಕಾರಿಗಳು ಅದನ್ನೆ ಮುಂದುವರಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ವಿ.ಬಿ. ಚಿಕ್ಕಮಠ ಎಚ್ಚರಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಸಾರ್ವತ್ರಿಕ ದೂರು ಸ್ವೀಕಾರ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಗಳು ಜಾರಿಯಾಗುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಿರ್ಲಕ್ಷ್ಯ ಕಂಡು ಬರುತ್ತಿದೆ. ಯಾವುದೇ ಇಲಾಖೆಯಾಗಲಿ ತಮ್ಮ ಕೆಲಸವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಯಾವುದೇ ಯೋಜನೆಯ ಸಫಲತೆ ಸಾಕಾರವಾಗುವವರೆಗೂ ಅದನ್ನು ನಿಭಾಯಿಸುವ ನಿರ್ವಹಿಸುವ ಕರ್ತವ್ಯ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.
ಕಳೆದ ಐದಾರು ವರ್ಷಗಳಿಂದ ಸಾಕಷ್ಟು ಕಾಮಗಾರಿ ನನೆಗುದಿಗೆ ಬಿದ್ದಿವೆ. ಸಾರ್ವಜನಿಕರಿಂದ ನೂರಾರು ದೂರುಗಳು ಬಂದಿದ್ದು, ಅಸಮರ್ಪಕ ಅವ್ಯವಸ್ಥೆಯಿಂದ ಕಾಮಗಾರಿಗಳು ಅರ್ಧ ಕೆಲಸಗಳಾಗಿ ಸ್ಥಗಿತಗೊಂಡಿವೆ. ಅವುಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆಯಲ್ಲೂ ಸಭೆಗಳು ಜಾಸ್ತಿ ನಡೆಯುತ್ತವೆ. ಆದರೆ ಕೆಲಸಗಳು ಆಗಲ್ಲ. ಬರಿ ಸಭೆ ನಡೆಸಿದರೂ ಕೆಲಸಗಳನ್ನು ನಿರ್ವಹಿಸುವುದು ಯಾರು? ಯಾವ ಕೆಲಸ ಎಲ್ಲಿಗೆ ಬಂದು ನಿಂತಿದೆ, ಯಾವ ಹಂತ ತಲುಪಿದೆ ಎಂಬುದನ್ನು ಯಾವ ಅಧಿಕಾರಿಗಳಿಗೂ ಗೊತ್ತಿಲ್ಲ. ಅಲ್ಲದೇ ಸಕಾಲದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಲಾಗಿದೆ. ನಿಗದಿತ ಸಮಯದಲ್ಲಿ ಸಕಾಲದ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿಲ್ಲ ಎಂಬ ಅಪವಾದಗಳಿವೆ. ಕೇಳಿದರೆ ಅಧಿಕಾರಿಗಳು ಸಕಾಲದಲ್ಲಿ ಸಲ್ಲಿಸಿದ ಅರ್ಜಿಗಳಿಗೆ ಯಾವುದೋ ಒಂದು ಕಾರಣ ನೀಡಿ ರದ್ದುಪಡಿಸಲಾಗುತ್ತದೆ. ಯಾವುದೇ ಅರ್ಜಿಗೆ ಮರಳಿ ಉತ್ತರಿಸಬೇಕಿದ್ದಲ್ಲಿ ಅದು ಕಾನೂನಾತ್ಮಕವಾಗಿರಬೇಕು ಎಂದರು.
ಅದೇ ರೀತಿ ಜೆಸ್ಕಾಂ ಮತ್ತು ಗಂಗಾ ಕಲ್ಯಾಣ ಯೋಜನೆ ಅಧಿಕಾರಿಗಳ ಕಾರ್ಯ ವೈಖರಿ ವಿಚಾರಿಸಿ, ಇಲಾಖಾವಾರು ಸಂಪರ್ಕ ಸಾಧಿ ಸಿ ಕೊಳವೆ ಬಾವಿ ಕೊರೆಯುವ ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕವಾಗಿ ವಿಚಾರಿಸಿ ಜೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೆಲಸ ಪೂರ್ಣವಾಗಿಸುವುದು ಯೋಜನೆಯ ಅಧಿಕಾರಿಗಳ ಕೆಲಸ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಹಾರಣಗೇರಾ ಕುಡಿಯುವ ನೀರಿನ ಕೊರತೆ ಮತ್ತು ಇತರೆ ದೂರುಗಳನ್ನು ಸ್ವೀಕರಿಸಿ ಸಂಬಂಧಿ ಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವುಗಳನ್ನು ಪರಿಹಾರಕ್ಕೆ ಸೂಚಿಸಿದರು. ಅಲ್ಲದೇ ನಿತ್ಯ ಪತ್ರಿಕೆಯಲ್ಲಿ ಸಾಕಷ್ಟು ಸಮಸ್ಯೆಗಳ ಕುರಿತು ಬರೆಯಲಾಗುತ್ತಿದೆ. ಅವುಗಳತ್ತ ಗಮನ ಹರಿಸಬೇಕು. ಸ್ಥಳ ಪರಿಶೀಲನೆ ಮಾಡುವ ಮೂಲಕ ತಕ್ಷಣ ಪರಿಹಾರಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ಲೋಕಾಯುಕ್ತ ಪಿಐ ಗುರುರಾಜ, ತಹಶೀಲ್ದಾರ್ ಜಗನ್ನಾಥರಡ್ಡಿ, ತಾಪಂ ಇಒ ಜಗನ್ನಾಥ ಮೂರ್ತಿ, ತಾಲೂಕು ಆರೋಗ್ಯ ಅಧಿ ಕಾರಿ ಡಾ| ರಮೇಶ ಗುತ್ತೇದಾರ ಉಪಸ್ಥಿತರಿದ್ದರು. ಸಭೆಯಲ್ಲಿ ಜೆಸ್ಕಾಂ ಎಇಇ ಶಾಂತಪ್ಪ ಪೂಜಾರಿ, ಗೃಹ ಮಂಡಳಿ ಎಇಇ ಶರಣಗೌಡ ಪಾಟೀಲ, ಸಿಡಿಪಿಒ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.