ಸೈದಾಪುರ: ಪ್ರಿಯತಮೆಯನ್ನು ನೋಡಲು ಹೋದಾತ ಬರ್ಬರ ಹತ್ಯೆ
Team Udayavani, Sep 5, 2022, 7:15 PM IST
ಸೈದಾಪುರ: ಪ್ರಿಯತಮೆಯನ್ನು ನೋಡಲು ಹೋದ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಯಾದಗಿರಿ ತಾಲೂಕಿನ ಕಡೇಚೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸಿದ್ಧಾರ್ಥ ಗೌಡ್(28) ಹತ್ಯೆಗೀಡಾದ ಯುವಕ.
ಕೂಲಿ ಕೆಲಸಕ್ಕಾಗಿ ದೂರದ ಬೆಂಗಳೂರಿಗೆ ವಲಸೆ ಹೋಗಿದ್ದ ಸಿದ್ಧಾರ್ಥ, ಕೆಲಸ ಮಾಡುವ ಸ್ಥಳದಲ್ಲಿ ಮದುವೆಯಾದ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿಸುತ್ತಿದ್ದ ಎನ್ನಲಾಗಿದೆ. ಆಕೆಯು ಅನ್ಯ ಕಾರಣಗಳಿಂದ ಕೆಲ ವರ್ಷಗಳ ಹಿಂದೆ ತನ್ನ ಪತಿಯಿಂದ ದೂರವಾಗಿದ್ದಳು. ಇಬ್ಬರು ಸ್ವಇಚ್ಛೆಯಿಂದ ಕೆಲ ಆಪ್ತರ ಮುಂದೆ ಮದುವೆ ಆಗಿದ್ದರು ಎಂದು ಹೇಳಲಾಗಿದೆ.
ಕೆಲ ದಿನಗಳ ಹಿಂದೆ ಪ್ರಿಯತಮೆ ತನ್ನ ತವರೂರಾದ ಕಡೇಚೂರಿಗೆ ಆಗಮಿಸಿದ್ದಾಳೆ. ಇದನ್ನರಿತ ಪ್ರಿಯಕರ ಅಕೆಯನ್ನು ಮಾತಾಡಿಸಿ ಬರುವೆನೆಂದು ತನ್ನ ಮನೆಯಲ್ಲಿ ಹೇಳಿ ಕಡೇಚೂರಿಗೆ ಆಗಮಿಸಿದ್ದಾನೆ. ಈ ವಿಷಯವನ್ನು ಮಹಿಳೆಯ ಪತಿ ಹಾಗೂ ಸಹೋದರರು ತಿಳಿದು ಸಿದ್ದಾರ್ಥನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಯುವಕನ ತಂದೆ ಸೈದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.