ಸಿದ್ಧರಾಮೇಶ್ವರ ಜಯಂತಿ 18ರಂದು
Team Udayavani, Jan 11, 2019, 10:40 AM IST
ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಜ. 18ರಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾದಗಿರಿ ತಾಲೂಕಿನ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಮಕರ ಸಂಕ್ರಮಣ ಹಬ್ಬವು ಜನವರಿ 14 ಮತ್ತು 15ರಂದು ಜರುಗುವ ಪ್ರಯುಕ್ತ ಜ. 15ರಂದು ಆಚರಿಸಬೇಕಾದ ಜಯಂತಿಯನ್ನು ಸಮಾಜದ ಮುಖಂಡರ ಒಪ್ಪಿಗೆಯ ಮೇರೆಗೆ ಜನವರಿ 18ರಂದು ಆಚರಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದ್ದಾರೆ.
ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ 9:00 ಗಂಟೆಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ಸದರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಡೆಯುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾ ್ಯಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ನಿರ್ದೇಶಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಸೂಕ್ತ ವ್ಯವಸ್ಥೆ, ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಹಿಂದುಳಿದ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಯಿತು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್ ಸಭೆಯ ನಡಾವಳಿ ಓದಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಲೆಕ್ಕಾಧೀಕ್ಷಕ ಮಲ್ಲಿಕಾರ್ಜುನ ಸಿ. ಕೊಲ್ಲೂರ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.