ಕಕ್ಕೇರಾಗೆ ಇಂದು ಸಿದ್ದರಾಮಯ್ಯ ಆಗಮನ
Team Udayavani, Apr 30, 2018, 5:02 PM IST
ಕಕ್ಕೇರಾ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕಾಂಗ್ರೆಸ್ ಬಹಿರಂಗ ಪ್ರಚಾರಕ್ಕೆ ಏ. 30ರಂದು ಕಕ್ಕೇರಾ ಪಟ್ಟಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ವೇದಿಕೆ ನಿರ್ಮಿಸಿದ್ದಾರೆ.
ಸುರಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಜಾ ವೆಂಕಟಪ್ಪ ನಾಯಕ ವೇದಿಕೆ ಸ್ಥಳಕ್ಕೆ ರವಿವಾರ ಭೇಟಿ ನೀಡಿ ಹೆಲಿಪ್ಯಾಡ್ ಸ್ಥಳ ಹಾಗೂ ವೇದಿಕೆ ಸಿದ್ಧತೆ ಕಾರ್ಯವನ್ನು ವೀಕ್ಷಿಸಿ ಅಚ್ಚುಕಟ್ಟಾಗಿ ವೇದಿಕೆ ನಿರ್ಮಾಣ ಮಾಡುವಂತೆ ಕಾರ್ಯಕರ್ತರಿಗೆ ಸೂಚಿಸಿದರು.
30 ಸಾವಿರಕ್ಕಿಂತ ಅಧಿಕ ಕಾಯಕರ್ತರು ಬೃಹತ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಬೇಸಿಗೆ ಬಿಸಿಲು ಇರುವುದರಿಂದ ಜನರಿಗೆ ಕುಳಿತು ಕೊಳ್ಳಲು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಕೇಳಲು ಈ ಒಂದು ಕಾರ್ಯ ಮಾಡಲಾಗಿದೆ. ಅಲ್ಲದೆ ಕಾರ್ಯಕರ್ತರು ಮತ್ತು ಮುಖಂಡರಿಗೆ ಇನ್ನೂ ರೈತಾಪಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಯಾವುದೇ ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರಚಾರ ಸಮಾವೇಶಕ್ಕೆ ನಿರೀಕ್ಷೆ ಮೀರಿ ಜನರು ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಹೆಲಿಪ್ಯಾಡ್‌ಗಾಗಿ ಸ್ಥಳಾವಕಾಶ ಮಾಡಲಾಗಿದೆ. ಬೆಳಗ್ಗೆ 12:30ಕ್ಕೆ ಕಕ್ಕೇರಾಗೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಮುಖಂಡರಾದ ಶಾಂತಗೌಡ ಚೆನ್ನಪಟ್ನ, ಗುಂಡಪ್ಪ ಸೊಲ್ಲಾಪುರ, ಪರಮಣ್ಣ ಕುಂಬಾರ, ಹಣಮಂತ್ರಾಯಗೌಡ ಜಹಾಗೀರದಾರ, ನಂದಣ್ಣ ದೇಸಾಯಿ, ಶರಣಕುಮಾರ ಸೊಲ್ಲಾಪುರ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.