ಮಾಸ್ಕ್ ಧರಿಸದೇ ವ್ಯಾಪಾರ: ಅಂಗಡಿ ಮಾಲೀಕರಿಗೆ ದಂಡ
Team Udayavani, Jun 4, 2020, 5:36 PM IST
ಸಾಂದರ್ಭಿಕ ಚಿತ್ರ
ಸಿಂಧನೂರು: ನಗರದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ಹಾಗೂ ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ನಗರಸಭೆ ಅಧಿಕಾರಿಗಳು ಬುಧವಾರ 1000 ರೂ. ದಂಡ ವಿಧಿಸಿದರು.
ಈ ವೇಳೆ ಮಾತನಾಡಿದ ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷ ಮೂತಿ, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಸರಿಯಾಗಿ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಹಾಗೂ ಮಾಸ್ಕ್ ಧರಿಸದೆ ವ್ಯಾಪಾರ ಮಾಡುವವರ ವಿರುದ್ಧ ದಂಡ ಹಾಕುತ್ತಿದ್ದೇವೆ. ಆಟೋದಲ್ಲಿ ಧ್ವನಿವರ್ಧಕ ಮೂಲಕ ಅರಿವು ಮೂಡಿಸುವ ಕಾರ್ಯ ದಿನನಿತ್ಯ ಮಾಡಲಾಗುತ್ತಿದೆ. ಆದರೂ ಜನ ಎಚ್ಚರಿಕೆ ವಹಿಸುತ್ತಿಲ್ಲ ಎಂದು ಹೇಳಿದರು.
ಈ ಹಿಂದೆ ಇದೇ ರೀತಿ ದಂಡ ಹಾಕಲಾಗಿತ್ತು. ಆಗ ನಗರದಲ್ಲಿ ಎಲ್ಲ ಅಂಗಡಿ ಮಾಲೀಕರಿಂದ 62,000 ರೂ. ದಂಡ ಕಟ್ಟಿಸಿಕೊಳ್ಳಲಾಗಿದೆ. ನಗರದಲ್ಲಿ ಇದೇ ರೀತಿ ಮುಂದುವರಿದರೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ನಗರಸಭೆ ಅಧಿಕಾರಿಗಳಾದ ಸಬ್ರಮಣ್ಯಂ, ಶರಣಬಸವ, ದುರುಗಪ್ಪ ಹಸಮಕಲ್, ಸತೀಶ, ಅಬ್ದುಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.