ಬೇಸಿಗೆಯಲ್ಲಿ ನೀರಿನ ಅಭಾವವಾಗದಿರಲಿ: ನಾಡಗೌಡ
Team Udayavani, Apr 17, 2020, 11:52 AM IST
ಸಿಂಧನೂರು: ನಗರದ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಭೆಯಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು
ಸಿಂಧನೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಎಚ್ಚರ ವಹಿಸಿ ಕೆರೆ ತುಂಬಿಸಿಕೊಳ್ಳಲು ಮುಂದಾಗುವಂತೆ ತಾಲೂಕಿನ ಪಿಡಿಒಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ನಿರ್ದೇಶನ ಮಾಡಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಪಿಡಿಒಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆಯಲ್ಲಿ ಜನ-ಜಾನುವಾರುಗಳು ಕುಡಿಯುವ ನೀರಿನ ಅಗತ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲೂ ನೀರಿನ ಬಗ್ಗೆ ಮುಂಜಾಗ್ರತಾ ಕ್ರಮ ಕ್ರಮ ಕೈಗೊಂಡು ನೀರು ವ್ಯರ್ಥ ಮಾಡದಂತೆ ಜಾಗೃತಿ ಮೂಡಿಸಬೇಕು. ಯಾರಾದರೂ ಬೇಜವಾಬ್ದಾರಿ ತೋರಿದರೆ ಅಂಥವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದರು.
ಈಗಾಗಲೇ ಕೊರೊನಾ ಬಗ್ಗೆ ಪ್ರತಿ ಗ್ರಾಪಂಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗುತ್ತಿದ್ದರೂ ಇನ್ನೂ ಕೆಲವರು ಮುಂಜಾಗ್ರತಾ ಕ್ರಮ ಅನುಸರಿಸುತ್ತಿಲ್ಲ. ರೋಗದ ಬಗ್ಗೆ ಎಚ್ಚರ ವಹಿಸದಿದ್ದರೆ ಮುಂದೆ ತೊಂದರೆಯಾಗುತ್ತದೆ ಎಂದರು. ಲಾಕ್‌ಡೌನ್‌ನಿಂದ ಬಡ ಕುಟುಂಬಗಳಿಗೆ ಕೆಲಸವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಡ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಕೆಲಸ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಕೊರೊನಾ ರೋಗ ನಿವಾರಣೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಬೇಕು ಎಂದರು. ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಗುರಿಕಾರ, ಇಒ ಬಾಬು ರಾಠೊಡ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.