ಅಖಾಡ ರಂಗೇರಿಸಿದ ಶಿವಸೇ
Team Udayavani, Apr 15, 2018, 4:55 PM IST
ಯಾದಗಿರಿ: ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಶಿವಸೇನೆ ಸ್ಪರ್ಧೆ ಮಾಡುತ್ತಿದ್ದು, 60 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಮೊದಲ ಪಟ್ಟಿಯಲ್ಲಿ 21 ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅದರಲ್ಲಿ ಯಾದಗಿರಿ, ಸುರಪುರ ಒಳಗೊಂಡಿದೆ.
ಹುಬ್ಬಳ್ಳಿಯಲ್ಲಿ ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರು ಯಾದಗಿರಿ ಮತಕ್ಷೇತ್ರದ ಅಭ್ಯರ್ಥಿಯನ್ನಾಗಿ ವಿಜಯಕುಮಾರ ಪಾಟೀಲ, ಸುರಪುರ ಮತಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜಾಪಿಡ್ಡ ನಾಯಕ ಅವರ ಹೆಸರು ಘೋಷಣೆ ಮಾಡಿದ್ದಾರೆ. ಯಾದಗಿರಿ ಮತಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ವಿಜಯಕುಮಾರ ಪಾಟೀಲ ಅವರು ಎಬಿವಿಪಿ ಕಾರ್ಯಕರ್ತರಾಗಿ ನಂತರ ಕಳೆದ ಐದು ವರ್ಷಗಳಿಂದ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಿಂದೂ ಪರ ಹೋರಾಟಗಳಲ್ಲಿ ಮಂಚೂಣಿಯಲ್ಲಿದ್ದಾರೆ.
ಸುರಪುರ ಮತಕ್ಷೇತ್ರದ ರಾಜಾ ಪಿಡ್ಡ ನಾಯಕ ಅವರು ಕಳೆದ 25ವರ್ಷಗಳಿಂದ ಆರ್ಎಸ್ಎಸ್ ಕಾರ್ಯಕರ್ತರಾಗಿ ಸೇವೆ
ಸಲ್ಲಿಸುತ್ತಿದ್ದಾರೆ. ಇವರು ಸಹ ಹಿಂದೂ ಪರ ಸಂಘಟನೆ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಅನೇಕ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರಿಬ್ಬರ ಸ್ಪರ್ಧೆಯಿಂದ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಕಾಲವೇ ನಿರ್ಧರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.