ಮುದ್ನಾಳ್‌ಗೆ ಬಸವ ಸಮಿತಿ ಸನ್ಮಾನ
Team Udayavani, Sep 11, 2022, 3:35 PM IST
ಯಾದಗಿರಿ: ಸಮಾಜದಲ್ಲಿ ಮನೆ ಮಾಡಿದ್ದ ಅಸ್ಪೃಶ್ಯತೆ ನಿವಾರಣೆಗಾಗಿ ಸದಾ ತಲೆ ಮೇಲೆ ಶ್ವೇತವಸ್ತ್ರ ಧರಿಸಿ, ಮೌನಕ್ರಾಂತಿ ಮಾಡಿದ್ದ ಸ್ವಾತಂತ್ರ್ಯ ಹೋರಾಟಗಾರ ದಿ. ವಿಶ್ವನಾಥರಡ್ಡಿ ಮುದ್ನಾಳ್ ಬಸವ ತತ್ವ ನಿಷ್ಠರಾಗಿದ್ದರು ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬಣ್ಣಿಸಿದರು.
ಬೆಂಗಳೂರಿನ ಬಸವ ಭವನದಲ್ಲಿ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ದಿ. ಬಿ.ಡಿ. ಜತ್ತಿ ಅವರ 110ನೇ ಜನ್ಮದಿನ ಕಾರ್ಯಕ್ರಮದಲ್ಲಿ ವೀರಶೈವ ಸಮುದಾಯಕ್ಕೆ ಮುದ್ನಾಳರ ಕೊಡುಗೆ ಸ್ಮರಿಸಿದ ಅವರು, ವರದಕ್ಷಿಣೆ ತೆಗೆದುಕೊಳ್ಳುವ ಮದುವೆಗೆಗಳಿಗೆ ವಿಶ್ವನಾಥರಡ್ಡಿ ಎಂದಿಗೂ ಹೋಗಲಿಲ್ಲ. ಹೈಕ (ಕಲ್ಯಾಣ ಕರ್ನಾಟಕ) ಭಾಗ ಸರ್ವತೋಮುಖ ಅಭಿವೃದ್ಧಿ ಕಾಣದ ಹೊರತು ನನಗ್ಯಾವ ಪ್ರಶಸ್ತಿಯೂ ಬೇಡ ಎಂದು ಮನೆ ಬಾಗಿಲಿಗೆ ಬಂದಿದ್ದ ಕರ್ನಾಟಕ ಏಕೀಕರಣ ಪ್ರಶಸ್ತಿ ನಿರಾಕರಿಸಿದ ನಿಸ್ವಾರ್ಥ ಜೀವಿ ಮುದ್ನಾಳ್ ಎಂದರು.
ಬಸವ ಸಮಿತಿ ಹಿರಿಯ ಉಪಾಧ್ಯಕ್ಷರಾಗಿ ಬಿಡಿ ಜತ್ತಿ ಮತ್ತು ಭೀಮಣ್ಣ ಖಂಡ್ರೆ ಜತೆ ಮುದ್ನಾಳ್ ಅವರು ನಾಡಿನಾದ್ಯಂತ ಶರಣರ ವಚನ, ಸಿದ್ಧಾಂತಗಳನ್ನು ಪಸರಿಸಲು ಹಗಲಿರಳು ಶ್ರಮಿಸಿದ್ದರು ಎಂದು ಹೇಳಿದರು.
ಇದೇ ವೇಳೆ ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಶಾಸಕ ವೆಂಕಟರಡ್ಡಿ ಮುದ್ನಾಳ್‌ರನ್ನು ಬಸವ ಸಮಿತಿಯಿಂದ ಸನ್ಮಾನಿಸಲಾಯಿತು. ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು ಹಾಗೂ ಬೇಲಿಮಠದ ಸ್ವಾಮಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.